ಹೈಕಮಾಂಡ್​ ಭೇಟಿಯಾಗಿದ್ದು ನಿಜ

ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ
Published on
ಬೆಳಗಾವಿ: ದೆಹಲಿಯಲ್ಲಿ ಕಾಂಗ್ರೆಸ್​ ಹೈಕಮಾಂಡ್​ ಭೇಟಿಯಾಗಿರುವುದು ನಿಜ. ಆದರೆ, ಯಾವುದೇ ರಾಜಕೀಯ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಕರಸಾ ಸಂಸ್ಥೆ ಉಪಾಧ್ಯಕ್ಷರಾಗಿ ಸುನೀಲ ಹನುಮಣ್ಣವರ ಆಯ್ಕೆಯಾದ ಹಿನ್ನೆಲೆಯಲ್ಲಿ ವರಿಷ್ಠರನ್ನು ಭೇಟಿ ಮಾಡುವುದಕ್ಕೆ ಹೋಗಿದ್ದೆವು. ಅಲ್ಲಿ ಬೇರೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ ಎಂದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಆರು ಕೋಟಿ ಜನಸಂಖ್ಯೆ ಇದೆ. ಹೀಗಾಗಿ, ಚರ್ಚೆಗಳು ಆಗುತ್ತಿರುತ್ತವೆ. ಚರ್ಚೆಗಳಿಗೆ ಕಡಿವಾಣ ಹಾಕಲಾಗುವುದಿಲ್ಲ. ಕೆಪಿಸಿಸಿ ಅಧ್ಯ ಸ್ಥಾನದ ವಿಚಾರ ಪದ ಮುಖಂಡರು ತೀರ್ಮಾನ ಮಾಡುತ್ತಾರೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಹುಲ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ವೇಳೆ ಏನು ಚರ್ಚೆ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ. ಸಚಿವ ಸಂಪುಟದ ವಿಸ್ತರಣೆ ನಮ್ಮ ಕೈಯಲ್ಲಿಲ್ಲ. ಈ ಬಗ್ಗೆ ಸಿಎಂ ಸಿದ್ದರಾಮಯ್ಯವರೇ ಹೇಳಬೇಕು. ಅಂದಾಗ ಮಾತ್ರ ಎಲ್ಲ ಊಹಾಪೋಹಗಳು ಕೊನೆಗೊಳ್ಳಲಿವೆ. ನಾಯಕತ್ವ ಬದಲಾವಣೆ ವಿಚಾರವನ್ನೂ ವರಿಷ್ಠರು ಗಮನಿಸುತ್ತಾರೆ, ಅವರೇ ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.
ಬಿಹಾರದಲ್ಲಿ ನಮ್ಮ ಲೆಕ್ಕಾಚಾರ ತಪ್ಪಿದೆ: ಬಿಹಾರ ಚುನಾವಣೆಯಲ್ಲಿ ನಮ್ಮ ಲೆಕ್ಕಾಚಾರ ತಪ್ಪಿರಬಹುದು. ಹೀಗಾಗಿ, ನಮಗೆ ಸೋಲಾಗಿದೆ. ಈಗ ಗ್ರೌಂಡ್​ ಸ್ಟಡಿ ಮಾಡಬೇಕಿದೆ. ನಾವು ಬಿಹಾರ ಚುನಾವಣೆ ಬಗ್ಗೆ ಬಹಳಷ್ಟು ಆಸೆ ಇಟ್ಟುಕೊಂಡಿದ್ದೆವು. ಹರಿಯಾಣದಲ್ಲೂ ಸೋತಿದ್ದೇವೆ. ಸೋಲು&ಗೆಲುವು ಚುನಾವಣೆಯಲ್ಲಿ ಸಹಜ. ಆದರೆ, ಇವಿಎಂ ಬಗ್ಗೆ ಅನುಮಾನ ಇದ್ದೇ ಇದೆ. ಕೇಂದ್ರ ಸರ್ಕಾರ ಮತ್ತು ಚುನಾವಣೆ ಆಯೋಗ ಇದಕ್ಕೆ ಸಮರ್ಥವಾದ ಸ್ಪಷ್ಟನೆ ನೀಡಬೇಕಿದೆ ಎಂದು ಆಗ್ರಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net