ಗ್ರಾಮೀಣ ಜಾತ್ರೆಗಳನ್ನು ನೋಡುವುದೇ ಚೆಂದ

ಬೆಳಗಾವಿ ಗ್ರಾಮೀಣ ಕ್ಷೇತ್ರದ ನಾಗೇರಹಾಳ ಗ್ರಾಮದ ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದರು
ಬೆಳಗಾವಿ ಗ್ರಾಮೀಣ ಕ್ಷೇತ್ರದ ನಾಗೇರಹಾಳ ಗ್ರಾಮದ ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದರು
Published on
ಬೆಳಗಾವಿ : ಗ್ರಾಮೀಣ ಭಾಗದಲ್ಲಿ ನಡೆಯುವ ಜಾತ್ರೆಗಳನ್ನು ನೋಡುವುದೇ ಚೆಂದ. ಗ್ರಾಮಸ್ಥರೆಲ್ಲ ಒಟ್ಟಾಗಿ ಭಕ್ತಿ ಹಾಗೂ ಸಂಭ್ರಮದಿಂದ ಜಾತ್ರೆಯನ್ನು ಆಚರಿಸುತ್ತಾರೆ. ಇದು ಗ್ರಾಮಗಳ ಒಗ್ಗಟ್ಟಿನ ಪ್ರತೀಕವಾಗಿರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ನಾಗೇರಹಾಳ ಗ್ರಾಮದ ಬಸವೇಶ್ವರ ಜಾತ್ರಾ ಮಹೋತ್ಸವ, ನೂತನ ರಥೋತ್ಸವ ಮತ್ತು ಗ್ರಾಮದೇವಿಯ ಉಡಿ ತುಂಬುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ನಾಗೇರಹಾಳ ಗ್ರಾಮದ ರಸ್ತೆಗಳ ಅಭಿವೃದ್ಧಿಗೆ ಈಗಾಗಲೇ ಅನುದಾನ ಮಂಜೂರಾಗಿದ್ದು, ಇಷ್ಟರಲ್ಲೆ ಕೆಲಸ ಆರಂಭವಾಗಲಿದೆ.
ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗ್ರಾಮದ ಹಿರಿಯರು, ಗ್ರಾಮದ ಭಕ್ತಾಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿದ್ದರು.
ಚೆಕ್ ವಿತರಣೆ: ಕಂಗ್ರಾಳಿ ಬಿಕೆ ಗ್ರಾಮದ ವಿಠ್ಠಲ ರುಕ್ಮಾಯಿ ದೇವಸ್ಥಾನದ ಅಭಿವೃದ್ಧಿಗಾಗಿ ಮೊದಲನೆ ಹಂತದ 11.50 ಲಕ್ಷ ರೂ.ಗಳ ಚೆಕ್‌ನ್ನು ದೇವಸ್ಥಾನ ಕಮಿಟಿಗೆ ಹಾಗೂ ಹಲಗಾ-ಬಸ್ತವಾಡ ಗ್ರಾಮದ ಶಾಂತಿನಾಥ ದಿಗಂಬರ ಜೈನ ಮಂದಿರದ ಅಭಿವೃದ್ಧಿಗಾಗಿ ಎರಡನೇ ಹಂತದ ಚೆಕ್ ಬಸದಿಯ ಪದಾಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಸ್ತಾಂತರಿಸಿದರು. ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್, ಕಾಡಾ ಅಧ್ಯಕ್ಷ ಯುವರಾಜ ಕದಂ, ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net