ಅಲಖನೂರ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಇಟ್ಟಪ್ಪ ಹಟ್ಟಿಮನಿ, ಉಪಾಧ್ಯಕ್ಷರಾಗಿ ರಾಜು ಯಲ್ಲಟ್ಟಿ ಹಾಗೂ ಆಡಳಿತ ಮಂಡಳಿ ಸದಸ್ಯರನ್ನು ಸನ್ಮಾನಿಸಲಾಯಿತು.
Published on:
Copied
Follow Us
ಕುಡಚಿ: ಸಮೀಪದ ಅಲಖನೂರ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಇಟ್ಟಪ್ಪ ಹಟ್ಟಿಮನಿ, ಉಪಾಧ್ಯಕ್ಷರಾಗಿ ರಾಜು ಯಲ್ಲಟ್ಟಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಶಾಂತೇಶ ಕಾಂಬಳೆ ತಿಳಿಸಿದ್ದಾರೆ.
ಅಲಖನೂರ ಗ್ರಾಮದ ವಿವಿಧೋದ್ದೇಶ ಗ್ರಾಮೀಣ ಕೃಷಿ ಸಹಕಾರ ಸಂಘದ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ತಲಾ ಒಂದೊಂದೇ ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು.