ಸಾಮಾಜಿಕ, ಧಾರ್ಮಿಕ ಸಾಮರಸ್ಯಕ್ಕೆ ಕೈ ಜೋಡಿಸಿ

ಬೆಳಗಾವಿಯಲ್ಲಿ ಮಂಗಳವಾರ ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಜಿಲ್ಲಾ ಅಲ್ಪಸಂಖ್ಯಾತ ಸಮತಿ ಸದಸ್ಯರೊಂದಿಗೆ ಸಭೆ ನಡೆಸಿದರು. ಲೂಯಿಸ್ ರಾಡ್ರಿಗ್ಸ್, ನಿಯಾಜ್ ಸೌದಾಗರ್, ಶಾಹಿದ್ ಮೆಮನ್, ಪವಿಂಧರ ಬಾಟಿಯಾ ಇತರರಿದ್ದರು.
ಬೆಳಗಾವಿಯಲ್ಲಿ ಮಂಗಳವಾರ ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಜಿಲ್ಲಾ ಅಲ್ಪಸಂಖ್ಯಾತ ಸಮತಿ ಸದಸ್ಯರೊಂದಿಗೆ ಸಭೆ ನಡೆಸಿದರು. ಲೂಯಿಸ್ ರಾಡ್ರಿಗ್ಸ್, ನಿಯಾಜ್ ಸೌದಾಗರ್, ಶಾಹಿದ್ ಮೆಮನ್, ಪವಿಂಧರ ಬಾಟಿಯಾ ಇತರರಿದ್ದರು.
Published on
ಬೆಳಗಾವಿ : ಕೋಮು ಸೌಹಾರ್ದತೆ ಬೆಳೆಸಲು, ಸಾಮಾಜಿಕ ಜಾಲತಾಣಗಳ ದುರುಪಯೋಗ, ಮಾದಕ ವ್ಯಸನ, ಜೂಜು ಹಾಗೂ ಸಣ್ಣಪುಟ್ಟ ಅಪರಾಧಗಳ ವಿರುದ್ಧ ಜಾಗೃತಿ ಮೂಡಿಸಲು ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಪೊಲೀಸ್ ಮತ್ತು ನಾಗರಿಕ ಆಡಳಿತದೊಂದಿಗೆ ಕೈಜೋಡಿಸಿ ಕೆಲಸ ಮಾಡಬೇಕು ಎಂದು ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಕೋರಿದರು.
ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ರಚಿಸಲಾದ ಜಿಲ್ಲಾ ಅಲ್ಪಸಂಖ್ಯಾತ ಸಮಿತಿಗೆ ರಾಜ್ಯ ಸರ್ಕಾರದಿಂದ ನಾಮನಿರ್ದೇಶನಗೊಂಡ ಸದಸ್ಯರ ಜತೆಗೆ ಮಂಗಳವಾರ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಅವರು, ಯುವಜನರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಲು ಸಾಮೂಹಿಕ ಪ್ರಯತ್ನಗಳ ಅಗತ್ಯವಿದೆ ಎಂದರು.
ಸಭೆಯಲ್ಲಿ ನಗರದ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೊಹಲ್ಲಾ ಸಮಿತಿಗಳ ರಚನೆ, ಶಾಲೆ ಮತ್ತು ಕಾಲೇಜುಗಳಲ್ಲಿ ಜಾಗೃತಿ, ಮುಸ್ಲಿಂ, ಕ್ರಿಶ್ಚಿಯನ್, ಜೈನ, ಸಿಖ್ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮಗಳ ಕುರಿತು ಚರ್ಚಿಸಲಾಯಿತು.
ಸಮಿತಿ ಸದಸ್ಯರಾದ ಲೂಯಿಸ್ ರಾಡ್ರಿಗ್ಸ್, ನಿಯಾಜ್ ಸೌದಾಗರ್, ಶಾಹಿದ್ ಮೇಮನ್, ಪರ್ವಿಂದರ್ ಭಾಟಿಯಾ, ಉಪ ಪೊಲೀಸ್ ಆಯುಕ್ತ ನಾರಾಯಣ ಬರಮನಿ, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ವಿಜಯ ಪ್ರಕಾಶ ಪೂಜೇರಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net