ಶಹಾಜಿ ಮಹಾರಾಜ ಸಮಾಧಿ ಅಭಿವೃದ್ಧಿಗೆ ಜಂಟಿ ಹೋರಾಟ

ಬೆಳಗಾವಿಯಲ್ಲಿ ಶನಿವಾರ ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕರನ್ನು ಡಾ.ಸೋನಾಲಿ ಸರ್ನೋಬತ್ ಸನ್ಮಾನಿಸಿದರು.
ಬೆಳಗಾವಿಯಲ್ಲಿ ಶನಿವಾರ ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕರನ್ನು ಡಾ.ಸೋನಾಲಿ ಸರ್ನೋಬತ್ ಸನ್ಮಾನಿಸಿದರು.
Published on
ಬೆಳಗಾವಿ:ಹೊದಿಗೆರೆಯಲ್ಲಿನ ಛತ್ರಪತಿ ಶಿವಾಜಿ ಮಹಾರಾಜರ ತಂದೆ ಶಹಾಜಿ ಸಮಾಧಿ ಸ್ಥಳದ ಅಭಿವೃದ್ಧಿಗೆ ಸಂಬಂಧಿಸಿದ ಸರ್ಕಾರದ ಮೇಲೆ ಒತ್ತಡ ಹಾಕಲು ಕರ್ನಾಟಕ ಕ್ಷತ್ರಿಯ ಮಾರಾಠ ಸಮಾಜ ಹಾಗೂ ಶ್ರೀರಾಮ ಸೇನೆ ಸಂಘಟನೆಗಳೂ ಜಂಟಿಯಾಗಿ ಹೋರಾಟ ಮಾಡಲು ನಿರ್ಧರಿಸಿವೆ.
ಶ್ರೀರಾಮ ಸೇನೆಯ ಸಂಸ್ಥಾಪಕ ಹಾಗೂ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ಶನಿವಾರ, ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್(ಕೆಕೆಎಂಪಿ) ಮಹಿಳಾ ಅಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್‌ರನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಯಿತು.
ಹೊದಿಗೆರೆಯಲ್ಲಿರುವ ಶಹಾಜಿ ಸಮಾಧಿ ಸ್ಥಳದ ಅಭಿವೃದ್ಧಿ ಕಾರ್ಯಗಳು ಕಳೆದ ಕೆಲ ವರ್ಷಗಳಿಂದ ಸ್ಥಗಿತಗೊಂಡಿವೆ. ಕೆಲ ದಿನಗಳ ಹಿಂದೆ ಬೆಳಗಾವಿಯ ಮರಾಠಾ ಸಮುದಾಯದ ಪ್ರತಿನಿಧಿಗಳು ಈ ಐತಿಹಾಸಿಕ ಸ್ಥಳಕ್ಕೆ ಭೇಟಿ ನೀಡಿ, ಈ ಸ್ಮಾರಕದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ, ಮುಂದಿನ ಸಮಾಧಿ ಸ್ಥಳದ ಸಂಪೂರ್ಣ ಅಭಿವೃದ್ಧಿ ಹಾಗೂ ಸ್ಥಗಿತಗೊಂಡಿರುವ ಕಾಮಗಾರಿಗಳಿಗೆ ವೇಗ ನೀಡುವ ಉದ್ದೇಶದಿಂದ ಶ್ರೀರಾಮ ಸೇನೆ ಜತೆಗೆ ಜಂಟಿಯಾಗಿ ನಿರಂತರ ಹೋರಾಟ ನಡೆಸುವ ಕುರಿತು ಚರ್ಚಿಸಲಾಯಿತು.
ಬೆಳಗಾವಿಯಲ್ಲಿ ಡಾ.ಸೋನಾಲಿ ಸರ್ನೋಬತ್ ಮತ್ತು ಮರಾಠಾ ಸಮುದಾಯ ಅತ್ಯುತ್ತಮ ಕಾರ್ಯ ಮಾಡುತ್ತಿದೆ. ಶಹಾಜಿ ಮಹಾರಾಜರ ಸಮಾಧಿ ಸ್ಥಳದ ಅಭಿವೃದ್ಧಿಯು ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಸ್ವಾಭಿಮಾನದ ವಿಷಯವಾಗಿದೆ. ಈ ಕಾರ್ಯಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ಸರ್ಕಾರದ ಮುಂದೆ ಬಲವಾದ ಬೇಡಿಕೆಯನ್ನು ಮಂಡಿಸಲಿದ್ದೇವೆ ಎಂದು ಪ್ರಮೋದ ಮುತಾಲಿಕ ಹೇಳಿದರು.
ಈ ಸಂದರ್ಭದಲ್ಲಿ ಮುತಾಲಿಕರನ್ನು ಡಾ.ಡಾ.ಸೋನಾಲಿ ಸರ್ನೋಬತ್ ಸನ್ಮಾನಿಸಿದರು. ಶ್ರೀರಾಮ ಸೇನೆಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮರಾಠ ಸಮುದಾಯದ ಪ್ರಮುಖರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net