ಬೆಳಗಾವಿಯಲ್ಲಿ ‘ಜೋಶಿ ಸ್ಮೃತಿ’ಗೆ ಸಾಕ್ಷಿಯಾದ ನಾಯಕರ ಸಮಾಗಮ

ಜಗನ್ನಾಥ ರಾವ್ ಜೋಶಿ ಸ್ಮಾರಕ ಭವನ ಲೋಕಾರ್ಪಣೆ ಕಾರ್ಯಕ್ರಮ.
ಜಗನ್ನಾಥ ರಾವ್ ಜೋಶಿ ಸ್ಮಾರಕ ಭವನ ಲೋಕಾರ್ಪಣೆ ಕಾರ್ಯಕ್ರಮ.
Published on
ಬೆಳಗಾವಿ: ನಗರದ ಹೃದಯಭಾಗದಲ್ಲಿ ನಡೆದ ಒಂದು ಭವ್ಯ ಸಮಾರಂಭಕ್ಕೆ ರಾಜಕೀಯ, ಸಾಮಾಜಿಕ ಹಾಗೂ ಸಂಘ ಪರಿವಾರದ ಪ್ರಮುಖರು ಒಂದೇ ವೇದಿಕೆಯಲ್ಲಿ ಸೇರುವ ಮೂಲಕ ವಿಶೇಷ ಮೆರುಗು ಮೂಡಿತು. ಜನ ಕಲ್ಯಾಣ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಜಗನ್ನಾಥ ರಾವ್ ಜೋಶಿ ಸ್ಮಾರಕ ಭವನದ ಲೋಕಾರ್ಪಣೆ ಕಾರ್ಯಕ್ರಮವು ಗಣ್ಯರ ಸಮಾಗಮಕ್ಕೆ ವೇದಿಕೆಯಾಯಿತು.
ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ದತ್ತಾತ್ರೇಯ ಹೊಸಬಾಳೆ ಉಪಸ್ಥಿತಿ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಸಂಸದರು, ಶಾಸಕರು, ಮಾಜಿ ಸಚಿವರು ಹಾಗೂ ಸಂಘ ಪರಿವಾರದ ಪ್ರಮುಖರು ಭಾಗವಹಿಸಿ ಸೇವಾ ಪರಂಪರೆಗೆ ನಮನ ಸಲ್ಲಿಸಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ಕೋಟ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಶಾಸಕರಾದ ಅಭಯ ಪಾಟೀಲ್, ಸಿ.ಸಿ. ಪಾಟೀಲ್, ಸಿದ್ದು ಸವದಿ, ಶಶಿಕಲಾ ಜೊಲ್ಲೆ, ವಿಠ್ಠಲ ಹಲಗೇಕರ, ಅರವಿಂದ ಬೆಲ್ಲದ, ದುರ್ಯೋಧನ ಐಹೊಳೆ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಹಾಜರಿದ್ದರು.
ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ, ರವಿಕುಮಾರ್, ಹಣಮಂತ ನಿರಾಣಿ, ಮಾಜಿ ಸಂಸದರಾದ ರಮೇಶ್ ಕತ್ತಿ, ಮಂಗಳಾ ಅಂಗಡಿ, ಅಣ್ಣಾಸಾಹೇಬ್ ಜೊಲ್ಲೆ, ಬಿಜೆಪಿ ಮುಖಂಡ ಮಹಾಂತೇಶ್ ಕವಟಗಿಮಠ, ಮಾಜಿ ಸಚಿವ ಮುರಗೇಶ್ ನಿರಾಣಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದರು.
800ಕ್ಕೂ ಅಧಿಕ ಗಣ್ಯರು, ಕಾರ್ಯಕರ್ತರು, ಆರ್‌ಎಸ್‌ಎಸ್ ಪ್ರಮುಖರು ಹಾಗೂ ಸ್ವಾಮೀಜಿಗಳ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮವು ಬೆಳಗಾವಿಯಲ್ಲಿ ಸಂಘಟನೆ ಮತ್ತು ರಾಜಕೀಯ ವಲಯದ ಗಮನ ಸೆಳೆದ ಸಮಾರಂಭ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net