ಪಾರಂಪರಿಕ ವೈದ್ಯ ಅಭಿವೃದ್ಧಿ ನಿಗಮ ರಚಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ಹಾಗೂ ಸಂಘಗಳ ಒಕ್ಕೂಟ ವತಿಯಿಂದ ಪ್ರತಿಭಟಿಸಲಾಯಿತು. ಬಸವಪ್ರಸಾದ ಸ್ವಾಮೀಜಿ,ಶರಣಪ್ಪ ಬಳ್ಳಾರಿ,ವಿಜಯಕುಮಾರ ಇತರರಿದ್ದರು.
Published on:
Copied
Follow Us
ಬೆಳಗಾವಿ: ಪಾರಂಪರಿಕ ವೈದ್ಯ ಅಭಿವೃದ್ಧಿ ನಿಗಮ ರಚನೆ ಸೇರಿ ವಿವಿಧ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿ ಅಖಿಲ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ಹಾಗೂ ಸಂಘಗಳ ಒಕ್ಕೂಟದಿಂದ ಪ್ರತಿಭಟಿಸಲಾಯಿತು.
ಪಾರಂಪರಿಕ ವೈದ್ಯ ವೃತ್ತಿಗೆ ಮಾನ್ಯತೆ ನೀಡಬೇಕು. ಹಿರಿಯ ಪಾರಂಪರಿಕ ವೈದ್ಯರನ್ನು ಗುರುತಿಸಿ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಪ್ರಶಸ್ತಿ ನೀಡಿ ಪುರಸ್ಕರಿಸಬೇಕು. ಔಷಧೀಯ ಸಸ್ಯ ಬೆಳೆಸಲು ಹಾಗೂ ಬಳಸಲು ಪ್ರತಿ ಗ್ರಾಮ, ತಾಲೂಕು, ಜಿಲ್ಲೆಗಳಲ್ಲಿ ಧನ್ವಂತರಿ ವನ ಹಾಗೂ ವೈದ್ಯಭವನ ನಿರ್ಮಿಸಬೇಕು.
ಹಿರಿಯ ಪಾರಂಪರಿಕ ವೈದ್ಯರಿಗೆ ಪ್ರತಿ ತಿಂಗಳು ಗೌರವಧನ ನೀಡಬೇಕು ಎಂದು ಒತ್ತಾಯಿಸಿದರು. ಶಿವಶಕ್ತಿ ಪೀಠ ಸುಕ್ಷೇತ್ರ ಇಳಕಲ್ಲ ಮಠದ ಬಸವಪ್ರಸಾದ ಸ್ವಾಮೀಜಿ, ಅಧ್ಯಕ್ಷ ಶರಣಪ್ಪ ಬಳ್ಳಾರಿ, ಕಾರ್ಯದರ್ಶಿ ವಿಜಯಕುಮಾರ ಇತರರಿದ್ದರು.