ಪಠ್ಯೇತರ ಚಟುವಟಿಕೆಗೂ ಕೆಎಲ್‌ಇ ಸಂಸ್ಥೆ ಆದ್ಯತೆ

ವೈಯಕ್ತಿಕ ಕ್ರೀಡಾ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ನಕುಲ ಕೆಂಚೆ, ಹೇಮಾ ಬೆಳೆಸೆ, ಕುಮಾರ ಕಲಶೆಟ್ಟಿ ಅವರನ್ನು ಡಾ.ಪ್ರಭಾಕರ ಕೋರೆ ಅಭಿನಂದಿಸಿದರು. ಮಲ್ಲಿಕಾರ್ಜುನ ಕೋರೆ, ಸುರೇಶ ಪಾಟೀಲ ಇತರರಿದ್ದರು.
ವೈಯಕ್ತಿಕ ಕ್ರೀಡಾ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ನಕುಲ ಕೆಂಚೆ, ಹೇಮಾ ಬೆಳೆಸೆ, ಕುಮಾರ ಕಲಶೆಟ್ಟಿ ಅವರನ್ನು ಡಾ.ಪ್ರಭಾಕರ ಕೋರೆ ಅಭಿನಂದಿಸಿದರು. ಮಲ್ಲಿಕಾರ್ಜುನ ಕೋರೆ, ಸುರೇಶ ಪಾಟೀಲ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ
  • ಡಾ.ಪ್ರಭಾಕರ ಕೋರೆ ಹೇಳಿಕೆ
ಮಾಂಜರಿ: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಮೂಲಕ ಕ್ರೀಡಾ ಪ್ರತಿಭೆ ಪ್ರದರ್ಶಿಸಬೇಕು. ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆ ಅನಾವರಣಕ್ಕೆ ಕೆಎಲ್‌ಇ ಸಂಸ್ಥೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು.
ಸಮೀಪದ ಅಂಕಲಿ ಗ್ರಾಮದ ಶಿವಾಲಯದಲ್ಲಿ ರಾಯಬಾಗ ತಾಲೂಕಿನ ಯಡ್ರಾವ ಗ್ರಾಮದ ಕೆಎಲ್‌ಇ ಸಂಸ್ಥೆಯ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಾದ ನಕುಲ ಕೆಂಚೆ ಚಕ್ರಎಸೆತದಲ್ಲಿ, ಹೇಮಾ ಬೆಳೆಸೆ ಮತ್ತು ಕುಮಾರ ಕಲಶೆಟ್ಟಿ. ಎತ್ತರ ಜಿಗಿತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಸನ್ಮಾನಿಸಿ ಮಾತನಾಡಿದರು.
ಚಿದಾನಂದ ಕೋರೆ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ, ಅಂಕಲಿ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ ಪಾಟೀಲ, ಶಾಲಾ ಸುಧಾರಣಾ ಸಮಿತಿ ಆಡಳಿತ ಮಂಡಳಿ ಅಧ್ಯಕ್ಷ ಸತ್ಯಪ್ಪ ಬಿಷ್ಠೆ, ಸದಸ್ಯರಾದ ಸದಾಶಿವ ನಿಪ್ಪಾಣಿ, ಅಜೀವ ಸದಸ್ಯ ಬಿ.ಎಸ್.ಅಂಬಿ, ಮುಖ್ಯಶಿಕ್ಷಕ ಡಿ.ಬಿ.ಕಬ್ಬೂರೆ, ದೈಹಿಕ ಶಿಕ್ಷಣ ಶಿಕ್ಷಕ ಎ.ಎಸ್.ಮಗದುಮ್ಮ, ಎಸ್.ಜಿ.ಕಾಂಬಳೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net