ನಿಪ್ಪಾಣಿ: ಜೊಲ್ಲೆ ಎಜುಕೇಶನ್ ಸೊಸೈಟಿಯ ಶಿವಶಂಕರ ಜೊಲ್ಲೆ ಪಬ್ಲಿಕ್ ಶಾಲೆಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ರೋಬಾಟಿಕ್ಸ್ ಶಿಕ್ಷಣ ನೀಡಲು ಒದಗಿಸಲು ಪ್ರಯೋಗಾಲಯ ನಿರ್ಮಿಸಲಾಗುವುದು ಎಂದು ಜೊಲ್ಲೆ ಗ್ರೂಪ್ ಉಪಾಧ್ಯಕ್ಷ ಬಸವಪ್ರಸಾದ ಜೊಲ್ಲೆ ಹೇಳಿದರು.
ಪಟ್ಟಣದ ಶಿವಶಂಕರ ಜೊಲ್ಲೆ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಾರ್ಷಿಕ ಸ್ನೇಹಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಜೊಲ್ಲೆ ಗ್ರೂಪ್‌ನಿಂದ ಹಾಲಶುರ‍್ಸ್ ಅಭಿವೃದ್ಧಿಗಾಗಿ ಆರ್ಥಿಕ ಸಹಾಯ ನೀಡಲಾಗಿದೆ. ಜೊಲ್ಲೆ ಗ್ರೂಪ್ ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಮತ್ತು ತಂತ್ರಜ್ಞಾನದ ಮಹತ್ವ ತಿಳಿದು ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದೆ. ೨೦ ವರ್ಷಗಳ ಹಿಂದೆ ಶಿಕ್ಷಣ ಸಂಘ ಸ್ಥಾಪಿಸಿ ಯಕ್ಸಂಬಾ ಮತ್ತು ನಿಪ್ಪಾಣಿಯಲ್ಲಿ ೧೮ ವಿಭಿನ್ನ ಕೋರ್ಸ್ಗಳ ಶಿಕ್ಷಣ ಒದಗಿಸಲಾಗುತ್ತಿದೆ.
ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸಲು ಸ್ಕೌಟ್ಸ್-ಗೈಡ್ಸ್ ಪ್ರಾರಂಭಿಸಲಾಗಿದೆ. ಈ ವರ್ಷ ಅಣ್ಣಾಸಾಹೇಬ ಜೊಲ್ಲೆ ಪದವಿಪೂರ್ವ ವಸತಿ ಕಾಲೇಜಿನಲ್ಲಿ ೪೦ ಉತ್ತಮ ವಿದ್ಯಾರ್ಥಿಗಳಿಗೆ ೧ ಕೋಟಿ ರೂ. ವಿದ್ಯಾರ್ಥಿ ವೇತನದೊಂದಿಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದರು. ಪ್ರಾಚಾರ್ಯೆ ಊರ್ಮಿಳಾ ಪಾಟೀಲ, ಬಸವ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿದರು.