ಸಾಮರ್ಥ್ಯ ವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ

ಬೆಳಗಾವಿಯ ಕೆಎಲ್‌ಎಸ್ ಗೋಗಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಂಗಳವಾರ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ಡಾ.ಎಂ.ಎಸ್.ಪಾಟೀಲ, ಡಾ.ರಾಜೇಂದ್ರ ಬೆಳಗಾಂವ್ಕರ್,  ಡಾ.ಪಿ.ಎಸ್.ಕೌಜಲಗಿ ಇತರರಿದ್ದರು.
ಬೆಳಗಾವಿಯ ಕೆಎಲ್‌ಎಸ್ ಗೋಗಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಂಗಳವಾರ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ಡಾ.ಎಂ.ಎಸ್.ಪಾಟೀಲ, ಡಾ.ರಾಜೇಂದ್ರ ಬೆಳಗಾಂವ್ಕರ್, ಡಾ.ಪಿ.ಎಸ್.ಕೌಜಲಗಿ ಇತರರಿದ್ದರು.
Published on
ಬೆಳಗಾವಿ: ಇಲ್ಲಿನ ಕೆಎಲ್‌ಎಸ್ ಗೋಗಟೆ ತಾಂತ್ರಿಕ ಮಹಾವಿದ್ಯಾಲಯ ಸಭಾಂಗಣದಲ್ಲಿ ಫೆ.28ರವರೆಗೆ ನಡೆಯಲಿರುವ ‘ಅಡ್ವಾನ್ಸ್ ಇನ್‌ಸ್ಟ್ರುಮೆಂಟೇಶನ್’ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮ ಮಂಗಳವಾರ ಆರಂಭಗೊಂಡಿತು.
ಪ್ರಾಂಶುಪಾಲ ಡಾ.ಎಂ.ಎಸ್.ಪಾಟೀಲ ಮಾತನಾಡಿ, ಐದು ದಿನಗಳ ಕಾರ್ಯಕ್ರಮ ಆಧುನಿಕ ವಿಶ್ಲೇಷಣಾ ಸಾಧನಗಳ ಅರಿವು ಹೆಚ್ಚಿಸುವುದರೊಂದಿಗೆ ಸಿದ್ಧಾಂತ ಮತ್ತು ಪ್ರಾಯೋಗಿಕ ಸಂಶೋಧನೆಗಳ ನಡುವಿನ ಅಂತರ ಕಡಿಮೆ ಮಾಡುವ ಉದ್ದೇಶ ಹೊಂದಿದೆ ಎಂದರು.
ಐಐಟಿ ಧಾರವಾಡದ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ನೀಲಕಮಲ್ ಮಹಾಂತಾ ಮಾತನಾಡಿ, ಆಧುನಿಕ ಸಂಶೋಧನೆಯಲ್ಲಿ ಸಾಧನಗಳ ಪಾತ್ರ ದೊಡ್ಡದಿದ್ದು, ವಿಷಯಾಧಾರಿತ ಸಂಶೋಧನೆಗಳಿಗೆ ಹೆಚ್ಚಿನ ಆದ್ಯತೆ ಸಿಗಬೇಕು ಎಂದರು.
ಆಡಳಿತ ಮಂಡಳಿ ಅಧ್ಯಕ್ಷ ಡಾ.ರಾಜೇಂದ್ರ ಬೆಳಗಾಂವ್ಕರ್, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಪಿ.ಎಸ್.ಕೌಜಲಗಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net