ಐನಾಪುರದ ಪಿಎಂಶ್ರೀ ಸರ್ಕಾರಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಅರುಣ ಗಾಣಿಗೇರ, ಸಂಜು ರಡ್ಡಿ, ರಮೇಶ ನಾಯಿಕ, ಸುನೀಲ ಅವಟಿ ಇತರರಿದ್ದರು.
ಐನಾಪುರ: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಪಟ್ಟಣ ಪಂಚಾಯಿತಿ ಸದಸ್ಯ ಅರುಣ ಗಾಣಿಗೇರ ಹೇಳಿದರು.
ಪಟ್ಟಣದ ಪಿಎಂಶ್ರೀ ಸರ್ಕಾರಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಎ್ಎಲ್‌ಎನ್ ಕಲಿಕಾ ಹಬ್ಬ ಉದ್ಘಾಟಿಸಿ ಮಾತನಾಡಿ, ಕಲಿಕಾ ಹಬ್ಬ ಚಿತ್ರಕಲೆ, ಮಣ್ಣಿನ ಮಾದರಿ ತಯಾರಿಕೆ, ಕಾಗದದ ಕೆಲಸ, ನಾಟಕಗಳ ಮೂಲಕ ಮಕ್ಕಳ ಸೃಜನಶೀಲ ಶಕ್ತಿ ಉತ್ತೇಜಿಸುತ್ತದೆ ಎಂದರು.
ಪಿಕೆಪಿಎಸ್ ಅಧ್ಯಕ್ಷ ತಮ್ಮಣ್ಣ ಪಾರಶೆಟ್ಟಿ ಮಾತನಾಡಿ, ಕಲಿಕಾ ಹಬ್ಬ ಮಕ್ಕಳ ಕಲಿಕೆಗೆ ಸಹಕಾರಿಯಾಗಿದೆ. ಕಲೆ, ಜನಪದ ಹಾಡು ಹಾಗೂ ಕಥೆಗಳಿಗೆ ಈ ಹಬ್ಬದಲ್ಲಿ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಎಂದರು.