ಸರಳ ಮದುವೆಗೆ ಆದ್ಯತೆ ಸಿಗಲಿ

ಮರಕುಂಬಿ ಗ್ರಾಮದ ಅಂಕಲಗಿ ಅಡವಿಸಿದ್ಧೇಶ್ವರ ಮಠದ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಅಮರಸಿದ್ಧೇಶ್ವರ ಸ್ವಾಮೀಜಿ, ನೀಲಕಂಠ ಸ್ವಾಮೀಜಿ, ಜಿ.ಬಿ.ಮಲ್ಲೇಶ ಇತರರಿದ್ದರು.
ಮರಕುಂಬಿ ಗ್ರಾಮದ ಅಂಕಲಗಿ ಅಡವಿಸಿದ್ಧೇಶ್ವರ ಮಠದ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಅಮರಸಿದ್ಧೇಶ್ವರ ಸ್ವಾಮೀಜಿ, ನೀಲಕಂಠ ಸ್ವಾಮೀಜಿ, ಜಿ.ಬಿ.ಮಲ್ಲೇಶ ಇತರರಿದ್ದರು.
Published on
ಮುರಗೋಡ: ಸಮೀಪದ ಮರಕುಂಬಿ ಗ್ರಾಮದಲ್ಲಿ ಅಂಕಲಗಿ ಅಡವಿಸಿದ್ಧೇಶ್ವರ ಮಠದ ಜಾತ್ರಾ ಮಹೋತ್ಸವ ಹಾಗೂ ಜಾನುವಾರು ಜಾತ್ರೆ ಅಂಗವಾಗಿ ಕಾರ್ತಿಕ ಪಾಟೀಲ ಸೇವಾ ಫೌಂಡೇಷನ್ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಅಂಕಲಗಿ ಅಡವಿಸಿದ್ಧೇಶ್ವರ ಮಠದ ಅಮರಸಿದ್ಧೇಶ್ವರ ಸ್ವಾಮೀಜಿ ಉದ್ಘಾಟಿಸಿದರು.
ಮುರಗೋಡ ಮಹಾಂತ ಮಠದ ನೀಲಕಂಠ ಸ್ವಾಮೀಜಿ, ಸ್ಥಳೀಯ ಚಾಮುಂಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಮಲ್ಲೇಶ ಜಿ.ಬಿ. ಮಾತನಾಡಿ, ಸಮಾಜದಲ್ಲಿ ಸಾಮರಸ್ಯ ಬೆಳೆಸುವಲ್ಲಿ ಸಾಮೂಹಿಕ ವಿವಾಹಗಳ ಪಾತ್ರ ಪ್ರಮುಖವಾಗಿದೆ. ಇಂದಿನ ಕಾಲಘಟ್ಟದಲ್ಲಿ ಸಾಮೂಹಿಕ ವಿವಾಹಗಳು ಪ್ರಶಸ್ತವಾಗಿವೆ ಎಂದು ತಿಳಿಸಿದರು.
ಶಾಸಕ ಮಹಾಂತೇಶ ಕೌಜಲಗಿ, ಮುಖಂಡ ಕಾರ್ತಿಕ ಪಾಟೀಲ, ಉದ್ಯಮಿ ವಿಜಯ ಮೆಟಗುಡ್ಡ, ರಾಹುಲ ಜಾರಕಿಹೊಳಿ,ಡಾ.ಮಹಾಂತೇಶ ಕಳ್ಳಿಬಡ್ಡಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net