ಬೆಳಗಾವಿ: ಬಂಜಾರ ಸಮುದಾಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ಸಮಾಜವಾಗಿದ್ದು, ಸಂತ ಸೇವಾಲಾಲರು ಕಲಿತು-ಕಲಿಸಿ ಎಂಬ ಸಂದೇಶ ನೀಡಿದ್ದಾರೆ. ಇದರಂತೆ ಸಮುದಾಯದವರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು ಎಂದು ನಿವೃತ್ತ ಮುಖ್ಯಶಿಕ್ಷಕ ಪಿ.ಬಿ.ಲಮಾಣಿ ಹೇಳಿದರು.
ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ವತಿಯಿಂದ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಭಾನುವಾರ ಏರ್ಪಡಿಸಿದ್ದ ಸಂತ ಸೇವಾಲಾಲರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಬಂಜಾರ ಸಮುದಾಯವು ಎಲ್ಲ ಕ್ಷೇತ್ರದಲ್ಲಿ ಸಾಧನೆ ಮಾಡಿ, ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದರು.
ಸಮಾರಂಭಕ್ಕೂ ಮುಂಚೆ ಕೋಟೆ ಕೆರೆ ಬಳಿ ಅಶೋಕ ವೃತ್ತದಿಂದ ಆರಂಭಗೊಂಡ ಸಂತ ಸೇವಾಲಾಲರ ಭಾವಚಿತ್ರದ ಮೆರವಣಿಗೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು. ವಿವಿಧ ಮಾರ್ಗಗಳ ಮೂಲಕದ ಕುಮಾರ ಗಂಧರ್ವ ಕಲಾ ಮಂದಿರದವರೆಗೆ ಮೆರವಣಿಗೆ ಸಾಗಿತು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಮಾಜಿ ಶಾಸಕ ಪಿ.ರಾಜೀವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಚಿತ್ರದುರ್ಗ ಬಂಜಾರ ಪೀಠದ ಸರ್ದಾರ ಸೇವಾಲಾಲ್‌ಸ್ವಾಮೀಜಿ ಇತರರಿದ್ದರು.