ಜೀರ್ಣೋದ್ಧಾರ ಕಾಮಗಾರಿ ಆರಂಭಿಸಲಿ

ನಿಪ್ಪಾಣಿಯಲ್ಲಿ ಹಮ್ಮಿಕೊಂಡಿದ್ದ ಭಕ್ತರ ಸಭೆಯಲ್ಲಿ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮಾತನಾಡಿದರು. ಶಿವಾನಂದ ಸ್ವಾಮೀಜಿ, ಮಹಾಂತೇಶ ಕವಟಗಿಮಠ, ಶಶಿಕಲಾ ಜೊಲ್ಲೆ, ಅಣ್ಣಾಸಾಹೇಬ ಜೊಲ್ಲೆ ಇದ್ದರು.
ನಿಪ್ಪಾಣಿಯಲ್ಲಿ ಹಮ್ಮಿಕೊಂಡಿದ್ದ ಭಕ್ತರ ಸಭೆಯಲ್ಲಿ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮಾತನಾಡಿದರು. ಶಿವಾನಂದ ಸ್ವಾಮೀಜಿ, ಮಹಾಂತೇಶ ಕವಟಗಿಮಠ, ಶಶಿಕಲಾ ಜೊಲ್ಲೆ, ಅಣ್ಣಾಸಾಹೇಬ ಜೊಲ್ಲೆ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ನಿಡಸೋಸಿ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹೇಳಿಕೆ
  • ಭಕ್ತರ ಸಭೆ

ನಿಪ್ಪಾಣಿ: ಆಡಿ ಗ್ರಾಮದ ಮಲ್ಲಿಕಾರ್ಜುನ ದೇವರಗುಡ್ಡ ಮಠದ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗಾಗಿ ಸಮಿತಿ ರಚಿಸಿ, ಜೀರ್ಣೋದ್ಧಾರ ಕಾಮಗಾರಿಗೆ ಶೀಘ್ರ ಚಾಲನೆ ನೀಡಬೇಕು ಎಂದು ನಿಡಸೋಸಿಯ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು.

ಮಲ್ಲಿಕಾರ್ಜುನ ದೇವಸ್ಥಾನ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಭಕ್ತರ ಸಭೆಯಲ್ಲಿ ಮಾತನಾಡಿ, ವಿವಿಧ ರಾಜ್ಯಗಳಿಂದ ಭಕ್ತರು ಆಗಮಿಸುತ್ತಾರೆ. ಆದ್ದರಿಂದ ಅಭಿವೃದ್ಧಿ ಕಾರ್ಯಕ್ಕೆ ಕೈಜೋಡಿಸಬೇಕು ಎಂದರು.
ಶಿವಾನಂದ ಸ್ವಾಮೀಜಿ ಮಾತನಾಡಿ, ದೇವಸ್ಥಾನದ ಅಭಿವೃದ್ಧಿ ಕಾರ್ಯವನ್ನು ಭಕ್ತರ ಸಹಕಾರದೊಂದಿಗೆ ಕೈಗೊಳ್ಳಬೇಕು. ದೇವಸ್ಥಾನವನ್ನು ಕಲ್ಲಿನಿಂದ ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಇದಕ್ಕೆ ೫ ಕೋಟಿ ರೂ. ವೆಚ್ಚವಾಗುವ ನಿರೀಕ್ಷೆಯಿದೆ. ಅಭಿವೃದ್ಧಿ ಸಮಿತಿ ರಚಿಸಲು ಆಕ್ಷೇಪವಿಲ್ಲ ಎಂದು ತಿಳಿಸಿದರು.
ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ದೇವಸ್ಥಾನದ ಅಭಿವೃದ್ಧಿಯಲ್ಲಿ ರಾಜಕಾರಣ ಮಾಡದೆ, ಕಾಮಗಾರಿ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು. ಕಾಮಗಾರಿ ಪೂರ್ಣಗೊಳಿಸಲು ಜೊಲ್ಲೆ ಗ್ರೂಪ್ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ದೇವಸ್ಥಾನ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆ

ಸೇರಿದಂತೆ ವಿವಿಧ ಇಲಾಖೆಗಳ ಅನುದಾನ ಪಡೆಯಲು ಪ್ರಯತ್ನಿಸಲಾಗುವುದು. ದೇಗುಲ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಭಕ್ತರು ನೆರವು ನೀಡಬೇಕು ಎಂದು ಮನವಿ ಮಾಡಿದರು.

ದೇವಸ್ಥಾನದ ಅಭಿವೃದ್ಧಿಗಾಗಿ ಬೀರೇಶ್ವರ ಕೋ-ಆಪರೇಟಿವ್ ಸೊಸೈಟಿಯಿಂದ ೫೧ ಲಕ್ಷ ರೂ. ನಿಧಿ ನೀಡುವುದಾಗಿ ಘೋಷಿಸಿದರು. ಭವಿಷ್ಯದಲ್ಲಿ ನಿಧಿ ಕೊರತೆಯಾದರೆ ಅದಕ್ಕೂ ಕಟಿಬದ್ಧರಾಗಿರುವುದಾಗಿ ತಿಳಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ಚಿಕ್ಕೋಡಿ ಭಾಗದಿಂದ ದೇವಸ್ಥಾನ ಅಭಿವೃದ್ಧಿಗೆ ಹೆಚ್ಚಿನ ನಿಽ ನೀಡುವ ಭರವಸೆ ನೀಡಿದರು.
ಚಂದ್ರಕಾಂತ ಕೋಠಿವಾಲೆ, ಪಂಕಜ ಪಾಟೀಲ, ಸಂಜಯ ಶಿಂತ್ರೆ, ಮಲ್ಲಗೌಡ ಪಾಟೀಲ, ರವಿ ಪಾಟೀಲ, ಅಪ್ಪಾಸಾಹೇಬ ಜೊಲ್ಲೆ, ಪಪ್ಪು ಪಾಟೀಲ, ವಿಶ್ವನಾಥ ಕಮತೆ, ಸುನೀಲ ಪಾಟೀಲ, ಎಂ.ಪಿ.ಪಾಟೀಲ, ವೀರೇಂದ್ರ ತಾರಳೆ, ರವೀಂದ್ರ ಶೆಟ್ಟಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net