ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪೋಕ್ಸೋ ಕಾಯ್ದೆ, ಬಾಲ್ಯವಿವಾಹ, ಬಾಲಕಾರ್ಮಿಕ ನಿಷೇಧ ಕುರಿತು ಶನಿವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಬೇಕು ಎಂದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಕುಂದು ಕೊರತೆ ಬಗ್ಗೆ ವಿಚಾರಿಸಿದರು.