ಕಾರ್ಯಕರ್ತರು ಪಕ್ಷ ಸಂಘಟನೆ ಬಲಿಷ್ಠಗೊಳಿಸಲಿ

ಯಮಕನಮರಡಿಯ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಸಭೆಯಲ್ಲಿ ಡಾ.ಸೋನಾಲಿ ಸರ್ನೋಬತ್ ಮಾತನಾಡಿದರು. ರಾಜೇಂದ್ರ ಮಠಪತಿ, ಸತೀಶ ಅಪ್ಪಾಜಿಗೋಳ, ಶ್ರೀಶೈಲ ಯಮಕನಮರಡಿ, ಅಪ್ಪಯ್ಯ ಜಾಜರಿ ಇತರರಿದ್ದರು.
ಯಮಕನಮರಡಿಯ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಸಭೆಯಲ್ಲಿ ಡಾ.ಸೋನಾಲಿ ಸರ್ನೋಬತ್ ಮಾತನಾಡಿದರು. ರಾಜೇಂದ್ರ ಮಠಪತಿ, ಸತೀಶ ಅಪ್ಪಾಜಿಗೋಳ, ಶ್ರೀಶೈಲ ಯಮಕನಮರಡಿ, ಅಪ್ಪಯ್ಯ ಜಾಜರಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಾ.ಸೋನಾಲಿ ಸರ್ನೋಬತ್ ಕರೆ
  • ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಸಭೆ
ಯಮಕನಮರಡಿ: ಬಿಜೆಪಿ ಬೂತ್ ಮಟ್ಟದ ಸಂಘಟನೆ ಮೇಲೆ ಅವಲಂಬಿತವಾಗಿದೆ. ಪ್ರತಿಯೊಬ್ಬ ಕಾರ್ಯಕರ್ತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವ ಮೂಲಕ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್ ಹೇಳಿದರು.
ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ವಿಶೇಷ ಮತದಾರ ಪಟ್ಟಿಯ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮಹತ್ವ ವಿವರಿಸಿದರು. ಬೂತ್ ಲೆವೆಲ ಏಜೆಂಟ್ (ಬಿಎಲ್‌ಎ) ತಂಡದ ಜವಾಬ್ದಾರಿಗಳು, ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಕಾರ್ಯಕರ್ತರ ಪಾತ್ರದ ಕುರಿತು ತಿಳಿಸಿದರು.
ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರಾಜೇಂದ್ರ ಮಠಪತಿ ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತರು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮತದಾರರ ಹೆಸರನ್ನು ನಮೂದಿಸಲು ಕ್ರಮ ಕೈಗೊಳ್ಳಬೇಕು. ಬೂತ್ ಮಟ್ಟದ ಕಾರ್ಯಕರ್ತರ ಶ್ರಮ ಮತ್ತು ಸಂಘಟನೆ ಪಕ್ಷದ ಯಶಸ್ಸಿಗೆ ಮೂಲಾಧಾರವಾಗಿದೆ ಎಂದು ಹೇಳಿದರು.
ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ಉತ್ತರ ಮಂಡಲ ಅಧ್ಯಕ್ಷ ಶ್ರೀಶೈಲ ಯಮಕನಮರಡಿ ಮಾತನಾಡಿ, ಕಾರ್ಯಕರ್ತರು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು.
ದಕ್ಷಿಣ ಮಂಡಲ ಅಧ್ಯಕ್ಷ ಅಪ್ಪಯ್ಯ ಜಾಜರಿ, ಬಿಎಲ್‌ಎ ತಂಡದ ಕಾರ್ಯದರ್ಶಿ ರಾಜೇಂದ್ರ ಮಠಪತಿ, ಕಲಗೌಡ ಪಾಟೀಲ, ಮಹಾವೀರ ನಾಸಿಪುಡಿ, ರಾಜು ಗೋಡಜ, ಈರಪ್ಪ ಪಾಟೀಲ, ಬರಮಾ ಸನದಿ, ಸಂತೋಷ ಪಾಟೀಲ, ಸಂತೋಷ ಭೂವಿ, ಪ್ರವೀಣ ಭಂಗಿ, ಈರಣ್ಣ ಗುರವ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net