ವಿದ್ಯಾರ್ಥಿಗಳು ಶಿಕ್ಷಣ ಜತೆಗೆ ಸಮಾಜಮುಖಿ ಚಿಂತನೆಗಳನ್ನು ರೂಢಿಸಿಕೊಳ್ಳಬೇಕು ಎಂದು ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ ಕಾಮಗೌಡ ಹೇಳಿದರು.
ಸಿದ್ಧಲಿಂಗೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಬಿಸಿಎ ಪದವಿ ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಯುವ ಸಬಲೀಕರಣ ಮತ್ತು ನಾಗರಿಕ ಜವಾಬ್ದಾರಿ ಕುರಿತು ಕೈಗೊಂಡ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ,
ಯುವ ವಿದ್ಯಾರ್ಥಿಗಳಲ್ಲಿ ಇಂದಿನ ತಂತ್ರಜ್ಞಾನದ ಯುಗದಲ್ಲಿ ನಡೆಯುವ ಸಾಮಾಜಿಕ ಕಾರ್ಯಗಳನ್ನು ಮನವರಿಕೆ ಮಾಡಿ ಸಮಾಜದಲ್ಲಿ ಏನು ನಡೆಯುತ್ತಿದೆ ಎಂದು ವಿದ್ಯಾರ್ಥಿಗಳು ಗಮನ ಹರಿಸುತ್ತಿರಬೇಕು. ವಿದ್ಯಾರ್ಥಿಗಳು ಸ್ವಯಂ ರಕ್ಷಣೆಗೆ ಪೂರಕವಾಗುವ ಕೌಶಲ ಬೆಳೆಸಿಕೊಳ್ಳಬೇಕು ಎಂದರು.