ರಾಮದುರ್ಗ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಸ್ಟೇಟ್ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
ನಗರದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಸ್ಟೇಟ್ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು.
ಜೀವನದಲ್ಲಿ ಸಕಾರಾತ್ಮಕ ಚಿಂತನೆ ಹಾಗೂ ಮನೋಭಾವ ರೂಢಿಸಿಕೊಳ್ಳಬೇಕು. ವಿದ್ಯಾರ್ಥಿಗಳು ನಿರಂತರ ಅಧ್ಯಯನ ಹಾಗೂ ಗುರುಗಳ ಮಾರ್ಗದರ್ಶನ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರಭಾರ ಪ್ರಾಚಾರ್ಯ ಎಸ್.ಎಸ್.ಬೂದೇಶ್ವರ ಮಾತನಾಡಿ, ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಪೂರಕವಾದ ಪರಿಸರದ ಜತೆಗೆ ಉತ್ತಮ ಸಹಪಾಠಿ ಆಯ್ಕೆ ಮಾಡಿಕೊಂಡಲ್ಲಿ ಬದುಕು ಉನ್ನತಿಯಡೆಗೆ ಸಾಗಲು ಸಾಧ್ಯವಾಗುತ್ತದೆ ಎಂದರು.