ಶಿಕ್ಷಣದಲ್ಲೂ ತಂತ್ರಜ್ಞಾನ ಅಳವಡಿಸಿಕೊಳ್ಳಲಿ

ಚಿಕ್ಕದಿನಕೊಪ್ಪ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ವಿಠ್ಠಲ ಹಲಗೇಕರ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿದರು. ಅರವಿಂದ ಪಾಟೀಲ, ಪ್ರಮೋದ ಕೋಚೆರಿ ಇತರಿದ್ದರು.
ಚಿಕ್ಕದಿನಕೊಪ್ಪ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ವಿಠ್ಠಲ ಹಲಗೇಕರ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿದರು. ಅರವಿಂದ ಪಾಟೀಲ, ಪ್ರಮೋದ ಕೋಚೆರಿ ಇತರಿದ್ದರು.
Published on
ಇಟಗಿ: ಪ್ರಸ್ತುತ ದಿನಗಳಲ್ಲಿ ಡಿಜಿಟಲ್ ತಂತ್ರಜ್ಞಾನದ ಪಾತ್ರ ಬಹುಮುಖ್ಯವಾಗಿದೆ. ಬದಲಾವಣೆಗೆ ಅನುಗುಣವಾಗಿ ಶೈಕ್ಷಣಿಕ ಕ್ಷೇತ್ರದಲ್ಲೂ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಸಮೀಪದ ಚಿಕ್ಕದಿನಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ಸಂಸ್ಥೆಯ ಸಿಎಸ್‌ಆರ್ ಯೋಜನೆಯಡಿ ವಿದ್ಯಾರ್ಥಿಗಳಿಗೆ ಡಿಜಿಟಲ್
ಸ್ಮಾರ್ಟ್‌ಬೋರ್ಡ್ ಮತ್ತು ಟ್ಯಾಬ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಾಸಕ ವಿಠ್ಠಲ ಹಲಗೇಕರ ಮಾತನಾಡಿ, ವಿದ್ಯಾರ್ಥಿಗಳು ನಿರಂತರ ಅಧ್ಯಯನ ಹಾಗೂ ಶಿಕ್ಷಕರ ಮಾರ್ಗದರ್ಶನ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಮಾಜಿ ಶಾಸಕ ಅರವಿಂದ ಪಾಟೀಲ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಪ್ರಮೋದ ಕೋಚೆರಿ, ಧನಶ್ರೀ ದೇಸಾಯಿ, ಬಿಇಒ ಪಿ.ರಾಮಪ್ಪ, ಮಂಜುನಾಥ ಹತ್ತಿ, ಸಂತೋಷ ನಾಯಕ, ಶಂಕರ ಕಮ್ಮಾರ, ಪ್ರಭಾರಿ ಮುಖ್ಯಶಿಕ್ಷಕ ಪ್ರಶಾಂತ ಪಾರಿಧಿ, ಎಸ್‌ಡಿಎಂಸಿ ಸದಸ್ಯರು ಪಾಲ್ಗೊಂಡಿದ್ದರು. ಮಂಜುನಾಥ ಅಂಬಡಗಟ್ಟಿ ನಿರೂಪಿಸಿದರು. ಎಸ್.ವಿ.ಕಲ್ಮಠ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net