ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಪಥದತ್ತ ಸಾಗುತ್ತಿದ್ದು, ನಮ್ಮ ಕ್ಷೇತ್ರಕ್ಕೆ ಒಳ್ಳೆಯ ದಿನಗಳು ಬಂದಿವೆ. ಕ್ಷೇತ್ರದ ಎಲ್ಲ ಸಮುದಾಯದವರ ಏಳಿಗೆಗೆ ಶ್ರಮಿಸುತ್ತಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ನಗರದ ಕುಮಾರಸ್ವಾಮಿ ಬಡಾವಣೆಯಲ್ಲಿ ಗುರುವಾರ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಕ್ಷೇತ್ರದಲ್ಲಿರುವ ಎಲ್ಲ ಸಮುದಾಯದವರು ಜತೆಯಾಗಿ ಸಾಗಬೇಕು. ಕುಮಾರಸ್ವಾಮಿ ಬಡಾವಣೆ ಮಾದರಿಯಾಗಿ ಅಭಿವೃದ್ಧಿ ಹೊಂದಬೇಕು ಎಂದರು.
ನಾವೆಲ್ಲ ವಿವಿಧ ಸಂಸ್ಕೃತಿಯಿಂದ ಬಂದಿದ್ದೇವೆ. ಹಿರಿಯರಿಗೆ ಗೌರವ ಕೊಡುವ ಪದ್ಧತಿ ಹೊಂದಿದ್ದೇವೆ. ನಾವೆಲ್ಲರೂ ಪ್ರಗತಿಪರ ಚಿಂತನೆಯಲ್ಲಿ ಬೆಳೆದಿದ್ದೇವೆ. ಜನರ ಪ್ರತಿನಿಧಿಯಾಗಿ ಕ್ಷೇತ್ರ ಸುಧಾರಣೆ ಮಾಡುವುದೇ ನನ್ನ ಕನಸಾಗಿದೆ. ಅಭಿವೃದ್ಧಿ ಕೆಲಸಗಳಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.