ರಾಯಬಾಗ: ತಾಯಂದಿರು ಮಕ್ಕಳ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿ, ಪೌಷ್ಟಿಕ ಆಹಾರ ನೀಡಬೇಕು ಎಂದು ನಸಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಆಯಿಷಾ ಪಾಟೀಲ ಹೇಳಿದರು. ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಯ ಬಾಜೀರಾವ ಮಗದುಮ್ಮ ಪ್ರೌಢಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ, ತಾಯಂದಿರ ಸಭೆಯಲ್ಲಿ ಮಾತನಾಡಿ, ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಬೇಕೆಂದರು.