ಖಡಕಲಾಟ ವಿರಕ್ತ ಮಠದಲ್ಲಿ ಹಮ್ಮಿಕೊಂಡಿದ್ದ ವಚನ ದರ್ಶನ ಪ್ರವಚನ ಸಮಾರೋಪ ಸಮಾರಂಭದಲ್ಲಿ ಸಂಪಾದನಾ ಸ್ವಾಮೀಜಿ ಅವರನ್ನು ಸನ್ಮಾನಿಸಲಾಯಿತು. ಶಿವಬಸವ ಸ್ವಾಮೀಜಿ, ಸುನೀಲ ಸಾವಂತ್ರಿ ಇತರರಿದ್ದರು.
ಚಿಕ್ಕೋಡಿ: ಸದೃಢ ಸಮಾಜ ನಿರ್ಮಾಣಕ್ಕೆ ಸಂಸ್ಕಾರವಂತ ಮಕ್ಕಳನ್ನು ರೂಪಿಸಬೇಕು ಎಂದು ಚಿಕ್ಕೋಡಿ ಸಂಪಾದನಾ ಚರಮೂರ್ತಿ ಮಠದ ಸಂಪಾದನಾ ಸ್ವಾಮೀಜಿ ಹೇಳಿದರು.
ತಾಲೂಕಿನ ಖಡಕಲಾಟ ಗ್ರಾಮದ ವಿರಕ್ತ ಮಠದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಚನ ದರ್ಶನ ಪ್ರವಚನ ಕಾರ್ಯಕ್ರಮ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಮಕ್ಕಳಲ್ಲಿ ಮಾನವೀಯ ಚಿಂತನೆ ಧಾರೆ ಎರೆಯಲು ತಾಯಂದಿರು ಪ್ರಯತ್ನಿಸಬೇಕೆಂದು ತಿಳಿಸಿದರು. ಖಡಕಲಾಟ ಅಪ್ಪನವರ ಕುಮಾರೇಶ್ವರ ವಿರಕ್ತಮಠದ ಶಿವಬಸವ ಸ್ವಾಮೀಜಿ ಮಾತನಾಡಿದರು. ಭಾರತೀಯ ಸೇನೆಗೆ ಆಯ್ಕೆಯಾದ ಯುವಕರನ್ನು, ದಾನಿಗಳನ್ನು, ದಾಸೋಹಿಗಳನ್ನು ಸನ್ಮಾನಿಸಲಾಯಿತು.