ಮಾದರಿ ಜಾತ್ರೆಗೆ ಶ್ರಮಿಸೋಣ

ಸವದತ್ತಿ ನಗರದ ಗ್ರಾಮದೇವಿಯರ ಜಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ಕುಸ್ತಿ ಪಂದ್ಯಾವಳಿಯಲ್ಲಿ ವಿಜೇತ ಚಿದಂಬರ ನಿಂಗಪ್ಪ ಹಾದಿಮನಿ ಅವರನ್ನು ಗಣ್ಯರು ಸನ್ಮಾನಿಸಿದರು. ಶಾಸಕ ವಿಶ್ವಾಸ ವೈದ್ಯ, ವಿರೂಪಾಕ್ಷ ಮಾಮನಿ ಹಾಗೂ ಗಣ್ಯರು ಇದ್ದರು.
ಸವದತ್ತಿ ನಗರದ ಗ್ರಾಮದೇವಿಯರ ಜಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ಕುಸ್ತಿ ಪಂದ್ಯಾವಳಿಯಲ್ಲಿ ವಿಜೇತ ಚಿದಂಬರ ನಿಂಗಪ್ಪ ಹಾದಿಮನಿ ಅವರನ್ನು ಗಣ್ಯರು ಸನ್ಮಾನಿಸಿದರು. ಶಾಸಕ ವಿಶ್ವಾಸ ವೈದ್ಯ, ವಿರೂಪಾಕ್ಷ ಮಾಮನಿ ಹಾಗೂ ಗಣ್ಯರು ಇದ್ದರು.
Published on
ಸವದತ್ತಿ:
ನಗರದಲ್ಲಿ ಗ್ರಾಮದೇವಿಯರ ಜಾತ್ರಾ ಮಹೋತ್ಸವ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಧರ್ಮಸಭೆ ಹಾಗೂ ಸಾಂಸ್ಕೃತಿಕ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲ ಸಮುದಾಯದ ಜನರು ಒಂದೇ ವೇದಿಕೆಯಲ್ಲಿ ಸೇರಿ ಗ್ರಾಮದೇವಿಯರ ಕೃಪೆಗೆ ಪಾತ್ರರಾಗುತ್ತಿರುವುದು ಸೌಹಾರ್ದದ ಸಂಕೇತವಾಗಿದೆ. ದೇವಿ ಜಾತ್ರೆಗೆ ವಿವಿಧೆಡೆಯಿಂದ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಸಮಿತಿ ವತಿಯಿಂದ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ. ಭಕ್ತರ ಸಹಕಾರ ಲವಾಗಿ ಜಾತ್ರೆ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.
ಜಾತ್ರಾ ಕಮಿಟಿ ಗೌರವಾಧ್ಯಕ್ಷ, ಶಾಸಕ ವಿಶ್ವಾಸ ವೈದ್ಯ ಮಾತನಾಡಿ, ಗ್ರಾಮದೇವಿಯರ ಜಾತ್ರಾ ಮಹೋತ್ಸವ ಸವದತ್ತಿಯ ಐತಿಹಾಸಿಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವ ಸಾರುತ್ತಿದೆ. ಎಲ್ಲರೂ ಸತ್ಸಂಗಗಳಲ್ಲಿ ಪಾಲ್ಗೊಂಡು ಮಹಾತ್ಮರ ಹಿತವಚನ ಆಲಿಸಬೇಕು ಎಂದು ಸಲಹೆ ನೀಡಿದರು.
ಧಾರವಾಡ ಮುರುಘಾಮಠದ ಡಾ.ಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ನೀಡಿ, ಗ್ರಾಮದೇವಿಯರ ಮಹಿಮೆ ಅಪಾರವಾಗಿದೆ. ಶ್ರದ್ಧಾ, ಭಕ್ತಿಯಿಂದ ಶಕ್ತಿದೇವಿ ಆರಾಧಿಸಿದರೆ ಬದುಕಿನ ಕಷ್ಟ-ಕಾರ್ಪಣ್ಯಗಳು ಕಳೆದು ಸುಖ, ಶಾಂತಿ ಹಾಗೂ ನೆಮ್ಮದಿ ಬದುಕು ಪ್ರಾಪ್ತವಾಗುತ್ತದೆ ಎಂದು ತಿಳಿಸಿದರು.
ಸುಳ್ಯ ಪಂಚಗೃಹ ಹಿರೇಮಠದ ಶಿವಮಹಾಂತ ಶಿವಾಚಾರ್ಯರು, ಮೊರಬ ಜಡಿಮಠದ ಮಹೇಶ್ವರ ಶಿವಾಚಾರ್ಯರು, ನರಗುಂದ ಶಾಸಕ ಸಿ.ಸಿ.ಪಾಟೀಲ, ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಪ್ರೀತಿ ದೊಡವಾಡ, ವಿಜಯ ಮೆಟಗುಡ್ಡ, ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಸಗೌಡ ಪಾಟೀಲ ಮಾತನಾಡಿದರು.
ದೊಡವಾಡ ಹಿರೇಮಠದ ಜಡೆಸಿದ್ಧೇಶ್ವರ ಶಿವಾಚಾರ್ಯರು, ಸುಭಾಸ ರಜಪೂತ, ಪ್ರವೀಣ ಪಟ್ಟಣಶೆಟ್ಟಿ, ಪ್ರಭು ಪ್ರಭುನವರ, ಮದನಲಾಲ ಚೋಪ್ರಾ, ಡಾ.ಎನ್.ಸಿ.ಬೆಂಡಿಗೇರಿ, ಡಾ.ವೈ.ಎಂ.ಯಾಕೊಳ್ಳಿ, ಶಿವಾನಂದ ತಾರಿಹಾಳ, ಎಂ.ಪಿ. ಪಾಟೀಲ, ಗಿರೀಶ ಮುನ್ನೋಳಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net