ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Lorry overturns after driver loses control
Lorry overturns after driver loses control
Published on
ಎಂ.ಕೆ.ಹುಬ್ಬಳ್ಳಿ: ಸಮೀಪದ ದಾಸ್ತಿಕೊಪ್ಪ ಗ್ರಾಮದ ಬಳಿಯ ಪುಣೆ&ಬೆಂಗಳೂರು ರಾಷ್ಟ್ರೀಯ ಹೆದ್ದಾರಿ&4ರಲ್ಲಿ ಕೇರಳ ರಾಜ್ಯದಿಂದ ಮುಂಬೆಗೆ ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಪಕ್ಕದ ಸರ್ವಿಸ್​ ರಸ್ತೆಗೆ ಭಾನುವಾರ ಪಲ್ಟಿಯಾಗಿದೆ. ಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಾಲಕ ಮತ್ತು ಕ್ಲಿನರ್​ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಸುಮಾರು 10 ಅಡಿಗೂ ಅಧಿಕ ಎತ್ತರದ ಹೆದ್ದಾರಿಯಿಂದ ಕೆಳಗಿನ ಸರ್ವಿಸ್​ ರಸ್ತೆಗೆ ಉರುಳಿದೆ. ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net