ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ಮಲ್ಲಿಕಾರ್ಜುನ ಕಂಬಿ ಐದೇಶಿ ನಿಮಿತ್ತ ಗುರುವಾರ ಹಮ್ಮಿಕೊಂಡಿದ್ದ ಹೇಮರಡ್ಡಿ ಮಲ್ಲಮ್ಮಳ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿ, ಎಲ್ಲವನ್ನು ಸಮಚಿತ್ತದಿಂದ ಸ್ವೀಕರಿಸಿ, ಶ್ರೀಶೈಲ ಮಲ್ಲಿಕಾರ್ಜುನನ್ನು ಸಾಕ್ಷಾತ್ಕರಿಸಿಕೊಂಡ ಮಲ್ಲಮ್ಮಳ ಬದುಕು ಅನುಕರಣೀಯ. ಯುವ ಪೀಳಿಗೆ ಮಲ್ಲಮ್ಮಳ ಆದರ್ಶ ಪಾಲಿಸಬೇಕು ಎಂದರು.
ಪಿ.ಎಲ್.ಪೂಜಾರಿ ಮಾತನಾಡಿ, ಗ್ರಾಮದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ನೈತಿಕ ಮೌಲ್ಯಗಳನ್ನು ಬಲಪಡಿಸಿಕೊಳ್ಳಬಹುದು ಎಂದರು.