ಮಾಚ್, ಏಪ್ರಿಲ್ ಗೃಹಲಕ್ಷ್ಮೀ ಹಣ ಶೀಘ್ರ ಜಮೆ

ಬೆಳಗಾವಿ ತಾಲೂಕಿನ ಬಾಕನೂರು ಗ್ರಾಮದ ಮಹಾಲಕ್ಷ್ಮೀ ದೇವಿ ಜಾತ್ರೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದರು.
ಬೆಳಗಾವಿ ತಾಲೂಕಿನ ಬಾಕನೂರು ಗ್ರಾಮದ ಮಹಾಲಕ್ಷ್ಮೀ ದೇವಿ ಜಾತ್ರೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದರು.
Published on
ಬೆಳಗಾವಿ : ಮಾರ್ಚ್ ತಿಂಗಳ ಗೃಹಲಕ್ಷ್ಮೀ ಕಂತು ನಾಲ್ಕೈದು ದಿನದಲ್ಲಿ ಹಾಗೂ ಏಪ್ರಿಲ್ ತಿಂಗಳ ಕಂತು 8-10 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ತಾಲೂಕಿನ ಬಾಕನೂರು ಗ್ರಾಮದಲ್ಲಿ ಸೋಮವಾರ ಜರುಗಿದ ಮಹಾಲಕ್ಷ್ಮೀ ದೇವಿ ಜಾತ್ರೆಯಲ್ಲಿ ಪಾಲ್ಗೊಂಡು, ಪೂಜೆ ಸಲ್ಲಿಸಿದ ಬಳಿಕ ಸಮಾರಂಭದಲ್ಲಿ ಮಾತನಾಡಿದ ಅವರು, ಕೆಲಸ ಮಾಡುವುದೆಂದರೆ ನನಗೆ ಹುಚ್ಚು. 2013ರ ಚುನಾವಣೆಯಲ್ಲಿ ಸೋತರೂ ಜನರ ಕೆಲಸ ಮಾಡುತ್ತಿದ್ದೆ. ಬೇರೆಯವರಂತೆ ನಾಟಕ ಮಾಡುವುದು ನನಗೆ ಗೊತ್ತಿಲ್ಲ, ಕೆಲಸ ಮಾಡುವುದೊಂದೇ ಗೊತ್ತು ಎಂದರು.
ಈ ಕ್ಷೇತ್ರದಲ್ಲಿ ಹಿಂದೆ ಆಯ್ಕೆಯಾದವರು ಕೇವಲ ಹಿಂದೂತ್ವ ಎನ್ನುತ್ತ ಓಡಾಡಿರುವುದು ಬಿಟ್ಟು ಬೇರೇನೂ ಮಾಡಿಲ್ಲ. ನಾನು ಏನೂ ಹೇಳುವುದಿಲ್ಲ, ಮಾಡಿ ತೋರಿಸುತ್ತಿದ್ದೇನೆ. ಪ್ರತಿ ಸಮುದಾಯಕ್ಕೆ ಸಹಾಯವಾಗುವ ರೀತಿ ಕೆಲಸ ಮಾಡುತ್ತಿದ್ದೇನೆ. ಸರ್ವ ಭಾಷಿಕ, ಸರ್ವ ಜಾತಿಯ ಜನರ ಕೆಲಸ ಮಾಡುತ್ತಿದ್ದೇನೆ. ಸರ್ವ ಕ್ಷೇತ್ರದಲ್ಲೂ ನಂಬರ್ ಒನ್ ಮಾಡುವ ಮೂಲಕ ಬಾರಾಮತಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇನೆ. ಭವಿಷ್ಯದಲ್ಲಿ ಕ್ಷೇತ್ರದ ರೈತರು ವರ್ಷಕ್ಕೆ ಎರಡ್ಮೂರು ಬೆಳೆ ತೆಗೆಯಲು ಅನುಕೂಲವಾಗುವ ನೀರಾವರಿ ಸೌಲಭ್ಯ ಒದಗಿಸುವ ಕಸನು ಹೊಂದಿದ್ದೇನೆ ಎಂದು ಹೇಳಿದರು.
ಕಾಡಾ ಅಧ್ಯಕ್ಷ ಯುವರಾಜ ಕದಂ, ಯುವ ಮುಖಂಡ ಮೃಣಾಲ ಹೆಬ್ಬಾಳ್ಕರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net