ಅಂಬೇಡ್ಕರ್ ಚಿಂತನೆ ಪಾಲನೆಯಾಗಲಿ

savadi
savadi
Published on
ಅಥಣಿ: ಭಾರತ ರತ್ನ, ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಇತಿಹಾಸ ಹಾಗೂ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ತಾಲೂಕಾಡಳಿತ, ತಾಪಂ, ಅಥಣಿ ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಗರದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶದ ಸ್ವಾತಂತ್ರ್ಯ ಹಾಗೂ ಸುಭದ್ರತೆಗಾಗಿ ಶ್ರಮಿಸಿದ ಹಲವು ಮಹಾತ್ಮರನ್ನು ಆಯಾ ಸಮುದಾಯಗಳಿಗೆ ಮಾತ್ರ ಸೀಮಿತ ಗೊಳಿಸಲಾಗುತ್ತಿದೆ. ರಾಷ್ಟ್ರನಾಯಕರಿಗೆ ಜಾತ್ಯತೀತವಾಗಿ ಗೌರವ ಸಲ್ಲಿಸಬೇಕು.
ಶಿಕ್ಷಣ ಹುಲಿಯ ಹಾಲಿನಂತೆ, ಅದನ್ನ ಕುಡಿದವರು ಘರ್ಜಿಸಲೇಬೇಕು ಎಂಬ ಅಂಬೇಡ್ಕರ್ ಅವರ ವಿಚಾರವನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದರು. ಉಪನ್ಯಾಸಕ ಸುಭಾಷ ನಾಟಿಕಾರ, ಪುರಸಭೆ ಅಧ್ಯಕ್ಷ ಶಿವಲೀಲಾ ಬುಟಾಳಿ, ಉಪಾಧ್ಯಕ್ಷ ಭುವನೇಶ್ವರಿ ಯಕ್ಕಂಚಿ, ಪಂಚ ಗ್ಯಾರಂಟಿ ಜಾರಿ ಸಮಿತಿ ಅಧ್ಯಕ್ಷ ಸಿದ್ಧಾರ್ಥ ಸಿಂಗೆ ಮಾತನಾಡಿದರು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ತಹಸೀಲ್ದಾರ್ ಸಿದರಾಯ ಬೋಸಗಿ, ತಾಪಂ ಇಒ ಶಿವಾನಂದ ಕಲ್ಲಾಪುರ, ಡಿವೈಎಸ್ಪಿ ಪ್ರಶಾಂತ್ ಮುನ್ನೊಳ್ಳಿ, ಪುರಸಭೆ ಮುಖ್ಯಾಧಿಕಾರಿ ಅಶೋಕ ಗುಡಿಮನಿ, ಸಮಾಜ ಕಲ್ಯಾಣ ಅಧಿಕಾರಿ ಪರಶುರಾಮ ಪತ್ತಾರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net