ನಗರದ ಕೆಎಲ್‌ಇ ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ ಕಾಲೇಜಿನಲ್ಲಿ ಮಂಗಳವಾರ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಯುವಜನರು ಕೇವಲ ಪಠ್ಯಕ್ಕೆ ಸೀಮಿತರಾಗದೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಹಾಗೂ ವ್ಯಕ್ತಿತ್ವ ವಿಕಸನಕ್ಕೂ ಆದ್ಯತೆ ನೀಡಬೇಕು. ಕಾಲೇಜು ಜೀವನದಲ್ಲಿ ಬೆಳೆಸಿಕೊಳ್ಳುವ ಸಂಸ್ಕಾರ, ಜ್ಞಾನ ಮತ್ತು ಶಿಸ್ತು ಭವಿಷ್ಯದ ಬದುಕಿಗೆ ಭದ್ರ ಅಡಿಪಾಯವಾಗುತ್ತದೆ ಎಂದರು. ಧಾರವಾಡದ ವಿದ್ಯಾರಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯೆ ಡಾ.ಶರಣಮ್ಮ ಗೊರೆಬಾಳ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಗೆ ಬಡತನ, ಭಾಷೆ ಅಥವಾ ಪರಿಸ್ಥಿತಿ ಅಡ್ಡಿಯಾಗುವುದಿಲ್ಲ. ಸತತ ಪ್ರಯತ್ನವೇಸಾಧನೆಯ ಮಾರ್ಗವಾಗಿದೆ ಎಂದರು.