ಬಣಜಿಗ ಸಮುದಾಯ ಬೆಳೆಯಲಿ

ಸವದತ್ತಿಯಲ್ಲಿ ಹಮ್ಮಿಕೊಂಡಿದ್ದ ಬಣಜಿಗ ಸಮಾವೇಶದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿಶ್ವಾಸ ವೈದ್ಯ,  ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಉಮೇಶ ಬಾಳಿ, ಮಲ್ಲಿಕಾರ್ಜುನ ರೂಡಗಿ ಇತರರಿದ್ದರು.
ಸವದತ್ತಿಯಲ್ಲಿ ಹಮ್ಮಿಕೊಂಡಿದ್ದ ಬಣಜಿಗ ಸಮಾವೇಶದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿಶ್ವಾಸ ವೈದ್ಯ, ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಉಮೇಶ ಬಾಳಿ, ಮಲ್ಲಿಕಾರ್ಜುನ ರೂಡಗಿ ಇತರರಿದ್ದರು.
Published on

ಬಣಜಿಗ ಸಮುದಾಯದ ಯುವಕರು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರಬೇಕು. ಸಮುದಾಯದ ಸಂಘಟನೆ ಬಲಪಡಿಸುವ ಜತೆಗೆ ಅಭಿವದ್ಧಿಗೆ ಶ್ರಮಿಸಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಕರಿಕಟ್ಟಿ ರಸ್ತೆಯ ನಿಕ್ಕಂ ಕಲ್ಯಾಣ ಮಂಟಪದಲ್ಲಿ ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಘಟಕದ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬಣಜಿಗ ಸಮುದಾಯದ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿ, ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ ಎಂದರು.
ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ರೂಡಗಿ ಮಾತನಾಡಿ, ಸಮುದಾಯದ ಅಭಿವೃದ್ಧಿಗೆ ಸಂಘಟನೆಯೇ ಪ್ರಮುಖ ಶಕ್ತಿಯಾಗಿದೆ. ಯುವಜನತೆ ಶಿಕ್ಷಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ಸಮುದಾಯದ ಹೆಮ್ಮೆ ಹೆಚ್ಚಿಸಬೇಕು ಎಂದರು.
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಮೂಲಿಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಪ್ರವೀಣ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಮೇಶ ಬಾಳಿ, ಸದಾಶಿವ ಕೌಜಲಗಿ, ಶಶಿಕಾಂತ ಪಟ್ಟಣ, ಮಲ್ಲಣ್ಣ ಯಾದವಾಡ ಮಾತನಾಡಿದರು.
ಪಥ್ವಿ ಕತ್ತಿ, ಶಿವಾನಂದ ಬಿದರಿ, ಬಸವರಾಜ ಅತ್ತಿಗೇರಿ, ಬಸವರಾಜ ಹಂಪಣ್ಣವರ, ಗಿರೀಶ ಉದೋಶಿ, ಮಹಾಂತೇಶ ಉಪ್ಪಿನ, ನೀಲಕಂಠ ಅಂಗಡಿ, ಬಸವಣ್ಣೆಪ್ಪ ವಾಂಗಿ, ಶಿವಯೋಗಿ ಕೀರಶೆಟ್ಟಿ, ಸದಾಶಿವ ಮುನವಳ್ಳಿ, ಶಿವಶಂಕ್ರೆಪ್ಪ ಹತ್ತಿ, ನಿಂಗಪ್ಪ ಹನಸಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net