

ರಾಯಬಾಗ: ತಾಲೂಕಿನ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಆ.15ರಿಂದ ಸೆ.15ರವರೆಗೆ ಜಾಬ್ ಕಾರ್ಡ್ ಮೇಳ ಹಮ್ಮಿಕೊಳ್ಳಲಾಗಿದ್ದು, ಕೂಲಿಕಾರರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಇಒ ಅರುಣ ಮಾಚಕನವರ ತಿಳಿಸಿದರು.
ತಾಲೂಕಿನ ವಿವಿಧೆಡೆ ಶುಕ್ರವಾರ ಜಾಬ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾಬ್ ಕಾರ್ಡ್ ಮೇಳದಲ್ಲಿ ಕೂಲಿಕಾರರನ್ನು ಸಕ್ರಿಯಗೊಳಿಸಿ, ಅರ್ಹರಿಗೆ ಹೊಸ ಜಾಬ್ ಕಾರ್ಡ್ ವಿತರಣೆ ಮಾಡಲಾಗುವುದು.
ಕೂಲಿಕಾರರಿಗೆ ಗ್ರಾಪಂ ವ್ಯಾಪ್ತಿಯಲ್ಲಿ 125 ದಿನ ಕೆಲಸ ನೀಡಿ, 382 ರೂ. ಕೂಲಿ ನೀಡಲಾಗುತ್ತಿದೆ. ಮಾಹಿತಿಗಾಗಿ ಸ್ಥಳೀಯ ಗ್ರಾಮ ಪಂಚಾಯಿತಿ ಕಚೇರಿ ಸಂಪರ್ಕಿಸುವಂತೆ ತಿಳಿಸಿದರು. ಐಇಸಿ ಸಂಯೋಜಕ ಮುತ್ತುರಾಜ ಗದಾಡಿ, ಅಶೋಕ ಯಳಗುಡೆ ಇತರರಿದ್ದರು.