ರಾಜ್ಯದಲ್ಲಿ 80 ಲಕ್ಷ ಲೀಟರ ಹಾಲು ಉತ್ಪಾದನೆ

 ಬೆಳಗಾವಿಯ ಮಹಾಂತೇಶ ನಗರದ ಸ್ಪೇಷಾಲಿಟಿ ಪಶುವೈದ್ಯಕೀಯ ಆಸ್ಪತ್ರೆ ಆವರಣದಲ್ಲಿ ಶನಿವಾರ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಸಚಿವರಾದ  ಕೆ.ವೆಂಕಟೇಶ ,ಸತೀಶ ಜಾರಕಿಹೊಳಿ ಉದ್ಘಾಟಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್, ಶಿಲ್ಪಾ ನಾಗ, ರಾಹುಲ ಶಿಂಧೆ ಇತರರಿದ್ದರು.
ಬೆಳಗಾವಿಯ ಮಹಾಂತೇಶ ನಗರದ ಸ್ಪೇಷಾಲಿಟಿ ಪಶುವೈದ್ಯಕೀಯ ಆಸ್ಪತ್ರೆ ಆವರಣದಲ್ಲಿ ಶನಿವಾರ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಸಚಿವರಾದ ಕೆ.ವೆಂಕಟೇಶ ,ಸತೀಶ ಜಾರಕಿಹೊಳಿ ಉದ್ಘಾಟಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್, ಶಿಲ್ಪಾ ನಾಗ, ರಾಹುಲ ಶಿಂಧೆ ಇತರರಿದ್ದರು.
Published on
ಬೆಳಗಾವಿ:ಗ್ರಾಮೀಣ ಭಾಗದಲ್ಲಿ ಜನರು ಹಸುಗಳನ್ನು ಸಾಕುವುದ ಮೂಲಕ ಹೈನುಗಾರಿಕೆಯನ್ನು ಕುಲ ಕಸುಬಾಗಿ ಮಾಡಿಕೊಂಡಿದ್ದು, ಹೈನುಗಾರಿಕೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ ತಿಳಿಸಿದರು.
ಬೆಳಗಾವಿಯ ಮಹಾಂತೇಶ ನಗರದ ಸ್ಪೇಷಾಲಿಟಿ ಪಶುವೈದ್ಯಕೀಯ ಆಸ್ಪತ್ರೆ ಆವರಣದಲ್ಲಿ ಶನಿವಾರ ವಿಶ್ವ ಪಶುವೈದ್ಯಕೀಯ ದಿನ ಪಶುಗಳ ಕಾಲು ಬಾಯಿ ರೋಗದ 9ನೇ ಸುತ್ತಿನ ಲಸಿಕಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿರು.
ರಾಜ್ಯದಲ್ಲಿ 70 ರಿಂದ 80 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಸರ್ಕಾರದ ವತಿಯಿಂದ ಹೈನುಗಾರಿಕೆಗೆ ಪ್ರೋತ್ಸಾಹಿಸಿದ ಹಿನ್ನೆಲೆಯಲ್ಲಿ ದಿನಕ್ಕೆ 1 ಕೋಟಿ ಲೀಟರಗೂ ಅಧಿಕ ಹಾಲು ಉತ್ಪಾದನೆಯಾಗುತ್ತಿದೆ. ಬಡವರಿಗೆ ಹಸು ಖರೀದಿಸಲು ಶಕ್ತಿ ಇಲ್ಲದ ಕಾರಣ ಅವರಿಗೆ ಈ ಬಾರಿಯ ಬಜೆಟ್ನಲ್ಲಿ ಶೇ. 25 ರಷ್ಟು ಸಬ್ಸಿಡಿ ನೀಡಲಾಗಿದ್ದು, ಬೆಳಗಾವಿ ಮತ್ತು ಗುಲ್ಬರ್ಗಾ ಜಿಲ್ಲೆಗೆ ಸುಮಾರು 20 ಸಾವಿರ ಹಸುಗಳನ್ನು ವಿತರಿಸುವ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸತೀಶ ಜಾರಕಿಹೊಳಿ ಮಾತನಾಡಿ, ರಾಜ್ಯದಲ್ಲಿ ಅತಿ ಹೆಚ್ಚು ಜಾನುವಾರಗಳ ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಪಶು ಆಸ್ಪತ್ರೆ, ಕ್ಲಿನಿಕ್‌ಗಳ ಸ್ಥಾಪನೆ ಜತೆಗೆ ಸೌಲಭ್ಯ ಕಲ್ಪಿಸುವುದು ಅವಶ್ಯಕವಾಗಿದೆ.ಲಸಿಕೆ ಕುರಿತು ರೈತರಲ್ಲಿ, ಹೈನುಗಾರರಲ್ಲಿ ನಿರಂತರವಾಗಿ ಜಾಗೃತಿ ಮೂಡಿಸುವ ಕೆಲಸ ಇಲಾಖೆ ಮಾಡಬೇಕು. ರೈತರಿಗೆ ಸಕಾಲಕ್ಕೆ ಯೋಜನೆ, ಜಾನುವಾರಗಳಿಗೆ ಲಸಿಕೆ, ಔಷಧಿ ಮುಟ್ಟಿಸುವ ಕೆಲಸ ನಿರಂತರವಾಗಿ ನಡೆಯಬೇಕು. ಈ ವಿಷಯದಲ್ಲಿ ನಿರ್ಲಕ್ಷೃ ಮಾಡಬಾರದು ಎಂದರು.
ಮಹಾರಾಷ್ಟ್ರದ ಮುಂಬೈ, ದೆಹಲಿ ಸೇರಿ ವಿವಿಧ ಮಹಾನಗರದಲ್ಲಿ ಕೆಎಂಎಫ್ ನಂದಿ ಬ್ರಾೃಂಡ್ ಖ್ಯಾತಿ ಪಡೆದುಕೊಂಡಿದೆ. ಗುಣಮಟ್ಟಕ್ಕೆ ಹೆಸರು ವಾಸಿಯಾಗಿರುವ ಕೆಎಂಎಪ್ ಬೆಳೆಯಲು ರೈತರು, ಹೈನುಗಾರರ ಪಾತ್ರ ಮುಖ್ಯವಾಗಿದೆ. ಹೀಗಾಗಿ ಇಲಾಖೆ ಉತ್ತೇಜನ ನೀಡುವ ಕೆಲಸ ಮಾಡಬೇಕು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಸರ್ಕಾರದ ಯೋಜನೆಗಳು ಕೇವಲ ಪುಸ್ತಕಕ್ಕೆ ಸೀಮಿತವಾಗದೇ ರೈತರ ಮನೆ ಬಾಗಿಲಿಗೆ ಮುಟ್ಟಬೇಕು. ರೈತ ಸಂತೋಷವಾಗಿದ್ದರೆ, ಇಡೀ ದೇಶವೇ ಸಮೃದ್ಧಿಯಾಗಿರುತ್ತದೆ. ರೈತ ಬೆಳೆದರೆ ಗ್ರಾಮ ಬೆಳೆದಂತೆ, ಗ್ರಾಮ ಬೆಳೆದರೆ ಜಿಲ್ಲೆ ಬೆಳೆದಂತೆ, ಜಿಲ್ಲೆ ಬೆಳೆದರೆ ರಾಜ್ಯ, ದೇಶ ಬೆಳೆದಂತೆ ಎಂದರು.
ಹೈನುಗಾರಿಕೆಯಿಂದ ಅದೆಷ್ಟೋ ಮಹಿಳೆಯರು ಹಾಲು ಉತ್ಪಾದನೆ ಮಾಡುವ ಮೂಲಕ ಜೀವನ ಕಂಡುಕೊಂಡಿದ್ದಾರೆ.ರೈತರಿಗೆ ಆಶ್ರಯದಾತ ಆಗಿರುವುದೇ ಮೇಕೆ, ಕುರಿ, ಹಸು, ಧನ, ಕರುಗಳು. ಇವುಗಳಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಶಾಸಕ ಗಣೇಶ ಹುಕ್ಕೇರಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆಯ ಆಯುಕ್ತ ಶಿಲ್ಪಾ ನಾಗ, ನಗರ ಪೋಲೀಸ ಆಯುಕ್ತ ಬೋರಸೆ ಭೂಷಣ, ಜಿಪಂ ಸಿಇಒ ರಾಹುಲ ಶಿಂಧೆ, ಡಾ.ಪಿ.ಶ್ರೀನಿವಾಸ, ಡಾ.ರವಿ ಸಾಲಿಗೌಡರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net