ನಗರದಲ್ಲಿ ರಸ್ತೆ ಗುಂಡಿಗಳ ಸಮಸ್ಯೆ ಇರುವ ಪ್ರದೇಶಗಳನ್ನು ಗುರುತಿಸಿ, ತುರ್ತು ಅವಶ್ಯಕತೆ ಇರುವ ರಸ್ತೆಗಳಿಗೆ ಮೊದಲ ಆದ್ಯತೆ ನೀಡಬೇಕು. ಗುಂಡಿ ಮುಚ್ಚುವಿಕೆ ಹಾಗೂ ರಸ್ತೆ ದುರಸ್ತಿ ಕಾಮಗಾರಿ ತ್ವರಿತವಾಗಿ ಕೈಗೊಳ್ಳಬೇಕು. ಆದರೆ, ರಸ್ತೆ ದುರಸ್ತಿ ಹೆಸರಿನಲ್ಲಿ ಅನುದಾನವನ್ನು ವಾರ್ಡ್‌ವಾರು ಹಂಚಿಕೆ ಮಾಡುವ ಕ್ರಮ ಸರಿಯಲ್ಲ.ಎಲ್ಲೆಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ, ಯಾವ ಕಾಮಗಾರಿಗೆ ಎಷ್ಟು ಅನುದಾನ ಬಳಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ನೀಡಬೇಕು. ಆಡಳಿತ ಮಂಡಳಿ ಪರಿಷತ ಸಭೆಯ ಹೆಸರಿನಲ್ಲಿ ಬೇಕಾಬಿಟ್ಟಿಯಾಗಿ ಅನುದಾನ ಬಳಕೆ ಮಾಡುವಂತಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.