ಶಾಸಕ ಅಭಯ ಪಾಟೀಲ ಕಾರ್ ಅಫಘಾತ

ಅಭಯ ಪಾಟೀಲ
ಅಭಯ ಪಾಟೀಲ
Published on

ಬೆಳಗಾವಿ: ದೆಹಲಿಯಲ್ಲಿ ಭಾನುವಾರ ರಾತ್ರಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಪ್ರಯಾಣಿಸುತ್ತಿದ್ದ ಇನೋವಾ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದ್ದು, ಸಣ್ಣಪುಟ್ಟ ಗಾಯವಾಗಿರುವ ಅಭಯ ಪಾಟೀಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

.

ಅಪಘಾತಕ್ಕೊಳಗಾದ ಇನ್ನೋವಾ ಕಾರಿನಲ್ಲಿ  ಪಾಟೀಲ‌ ಜತೆಗೆ

 ದೆಹಲಿಯ ಕಿರಾರಿ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಝಾ ಸಹ ಇದ್ದರು.

 ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಸ್ವಿಫ್ಟ್ ಕಾರನಲ್ಲಿ

ಅಶುತೋಷ್ ಪಾಂಡೆ ಎಂಬುವವರು ಲಕ್ಷ್ಮೀ

ನಗರದಿಂದ ಐಟಿಒ ಕಡೆಗೆ ತೆರಳುತ್ತಿದ್ದರು. ಪಿಡಬ್ಲ್ಯೂಡಿ ಕಚೇರಿ ಸಮೀಪ ಈ ಸ್ವಿಫ್ಟ್ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು,

 ಎದುರಿನಿಂದ ಬರುತ್ತಿದ್ದ ಶಾಸಕರಿದ್ದ ಇನ್ನೋವಾಗೆ ತಾಗಿದೆ ಎನ್ನಲಾಗಿದೆ.

ಅಪಘಾತದಲ್ಲಿ ಸ್ವಿಫ್ಟ್ ಕಾರಿನ ಚಾಲಕ ಅಶುತೋಷ್ ಪಾಂಡೆ, ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಇನ್ನೋವಾ ಕಾರಿನಲ್ಲಿದ್ದ ಶಾಸಕರಾದ ಅಭಯ ಪಾಟೀಲ, ಅನಿಲ ಝಾ ಗಾಯಗೊಂಡಿದ್ದಾರೆ.

ಘಟನೆ ಸಂಭವಿಸುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ತಕ್ಷಣವೇ ಲೋಕನಾಯಕ ಜೈ ಪ್ರಕಾಶ್ ನಾರಾಯಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net