ಮೋದಿ ಸರ್ಕಾರದಿಂದ ಜನ ವಿರೋಧಿ ನೀತಿ - ಸಚಿವ ಸತೀಶ ಜಾರಕಿಹೊಳಿ

ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ
Published on
ಬೆಳಗಾವಿ: ತೈಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರ ಜಾಗತಿಕ ಬಿಕ್ಕಟ್ಟಿನ ನೆಪ ಹಾಗೂ ಅಭಿವೃದ್ಧಿ ಹೆಸರಿನಲ್ಲಿ ಸಮರ್ಥಿಸಿಕೊಳ್ಳುತ್ತಿರುವುದು ತಪ್ಪು. ಇದು ಜನವಿರೋಧಿ ನೀತಿ ಎಂದು ಸಚಿವ ಸತೀಶ ಜಾರಕಿಹೊಳಿ ಆರೋಪಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾಸ್, ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಚುನಾವಣೆ ಮುಗಿದ ತಕ್ಷಣ ಏರಿಕೆ ಮಾಡುವುದು ಹೊಸದೇನಲ್ಲ. ಕೇಂದ್ರ ಸರ್ಕಾರ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದ್ದು, ಜನರ ಬದುಕು ದುಸ್ತರವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ಯುಪಿಎ ಆಡಳಿತಾವಧಿಯಲ್ಲಿ ಪೆಟ್ರೋಲ್ ದರ ಕೇವಲ 1 ರೂಪಾಯಿ ಹೆಚ್ಚಾದರೂ ದೇಶಾದ್ಯಂತ ಬೀದಿಗಿಳಿದ್ದ ಬಿಜೆಪಿ ನಾಯಕರು, ತಮ್ಮದೇ ಸರ್ಕಾರ ನಿರಂತರವಾಗಿ ಬೆಲೆ ಏರಿಸುತ್ತಿದ್ದರೂ ಮೌನ ವಹಿಸಿರುವುದರ ಹಿಂದೆ ರಾಜಕೀಯ ಸ್ವಾರ್ಥವಿದೆ ಎಂದರು.
"

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಪಷ್ಟನೆ ಕೊಟ್ಟಿದ್ದಾರೆ. ಇಡೀ ಜಗತ್ತಿನಲ್ಲಿ ಈ ವಾತಾವರಣವಿದೆ. ಪಾಕಿಸ್ತಾನ, ಅಮೆರಿಕ ಸೇರಿದಂತೆ ಬಹುತೇಕ ರಾಷ್ಟ್ರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಭಾರತದಲ್ಲಿ ಶೇ.3ರಷ್ಟು ಮಾತ್ರ ಏರಿಸಲಾಗಿದೆ. ಯುದ್ಧದ ವಾತಾವರಣ ತಿಳಿಯಾದ ಬಳಿಕ ಬೆಲೆ ಇಳಿಕೆಯಾಗಲಿದೆ. ಇದನ್ನು ರಾಜಕೀಯಗೊಳಿಸಿ ಟೀಕೆ, ಟಿಪ್ಪಣಿ ಮಾಡುವುದು ಸರಿಯಲ್ಲ.

— | ಜಗದೀಶ ಶೆಟ್ಟರ ಸಂಸದ


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net