ಮನರೇಗಾ ತಿದ್ದುಪಡಿ ವಿರುದ್ಧ ತಿಂಗಳಿಡಿ ಹೋರಾಟ

ಬೆಳಗಾವಿಯ ಕಾಂಗ್ರೆಸ್​ ಕಚೇರಿಯಲ್ಲಿ ಶನಿವಾರ ಎಐಸಿಸಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ್​ ಮನರೇಗಾ ಉಳಿಸಿ ಆಂದೋಲನದ ಪೋಸ್ಟರ್​ ಬಿಡುಗಡೆಗೊಳಿಸಿದರು. ಲಕ್ಷ$್ಮಣರಾವ್​ ಚಿಂಗಳೆ, ವಿನಯ ನಾವಲಗಟ್ಟಿ, ಮೃಣಾಲ ಹೆಬ್ಬಾಳ್ಕರ್​ ಇತರರಿದ್ದಾರೆ.
ಬೆಳಗಾವಿಯ ಕಾಂಗ್ರೆಸ್​ ಕಚೇರಿಯಲ್ಲಿ ಶನಿವಾರ ಎಐಸಿಸಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ್​ ಮನರೇಗಾ ಉಳಿಸಿ ಆಂದೋಲನದ ಪೋಸ್ಟರ್​ ಬಿಡುಗಡೆಗೊಳಿಸಿದರು. ಲಕ್ಷ$್ಮಣರಾವ್​ ಚಿಂಗಳೆ, ವಿನಯ ನಾವಲಗಟ್ಟಿ, ಮೃಣಾಲ ಹೆಬ್ಬಾಳ್ಕರ್​ ಇತರರಿದ್ದಾರೆ.
Published on
ಬೆಳಗಾವಿ: ಮನರೇಗಾ ತಿದ್ದುಪಡಿ ಮಸೂದೆ ಹಿಂಪಡೆಯಲು ಆಗ್ರಹಿಸಿ ಈ ಹಿಂದೆ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಡೆಸಲಾಗಿದ್ದ ಹೋರಾಟ ಮಾದರಿಯಲ್ಲೇ ತಿಂಗಳಪೂರ್ತಿ ವಿವಿಧ ಹಂತಗಳಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟಿಸಲಾಗುವುದು ಎಂದು ಎಐಸಿಸಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ್​ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ ಮತ ಕಳವು ಬಗ್ಗೆ ಪ್ರಶ್ನೆ ಎತ್ತಿದ ನಂತರ ದೇಶಾದ್ಯಂತ ಆಂದೋಲನದ ಸ್ವರೂಪ ಪಡೆದುಕೊಳ್ಳುತ್ತಿತ್ತು. ಇದನ್ನು ಡೈವರ್ಟ್​ ಮಾಡುವುದಕ್ಕಾಗಿಯೇ ನರೇಗಾದಿಂದ ಮಹಾತ್ಮ ಗಾಂಧೀಜಿ ಹೆಸರು ತೆಗೆದಿದ್ದಾರೆ. ಅನೇಕ ಬದಲಾವಣೆ ಮಾಡಿ, ನ್ಯೂನತೆಗಳಿದ್ದವು ಎಂಬ ನೆಪ ಹೇಳಿದ್ದಾರೆ ಎಂದು ಆರೋಪಿಸಿದರು.
ಇಂದಿನಿಂದ ಪ್ರತಿಭಟನೆ: ಜ.11ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ, ಜ.12ರಿಂದ 29ರವರೆಗೆ ಗ್ರಾಪಂ ಮಟ್ಟದಲ್ಲಿ ಜನಸಂಪರ್ಕ ಸಮಾವೇಶ, ಜ.30ರಂದು ಗ್ರಾಪಂ ವಾರ್ಡ್​ ಮತ್ತು ಬ್ಲಾಕ್​ ಮಟ್ಟದಲ್ಲಿ ಶಾಂತಿಯುತ ಧರಣಿ, ಜ.31ರಿಂದ ಫೆ.6ರವರೆಗೆ ಜಿಲ್ಲಾಮಟ್ಟದಲ್ಲಿ ಮನರೇಗಾ ಬಚಾವೋ ಧರಣಿ, ಫೆ.7ರಿಂದ 15ರವರೆಗೆ ರಾಜ್ಯ ಮಟ್ಟದಲ್ಲಿ ಬಿಜೆಪಿ ಸರ್ಕಾರ ಇರುವಲ್ಲಿ ವಿಧಾನಸೌಧಗಳಿಗೆ ಹಾಗೂ ಕಾಂಗ್ರೆಸ್​ ಮತ್ತು ಮಿತ್ರ ಪಕ್ಷಗಳ ಸರ್ಕಾರವಿರುವ ರಾಜ್ಯದಲ್ಲಿ ಬಿಜೆಪಿ ರಾಜ್ಯ ಕಚೇರಿ ಇಲ್ಲವೇ ಕೇಂದ್ರ ಸರ್ಕಾರದ ಪ್ರಮುಖ ಕಚೇರಿಗಳಿಗೆ ಮುತ್ತಿಗೆ ಹಾಕುವುದು, ಫೆ.16ರಿಂದ 25ರವರೆಗೆ ಆಯಾ ರಾಜ್ಯದಲ್ಲಿ ವಿಭಾಗವಾರು ಪ್ರತಿಭಟನಾ ರ್ಯಾಲಿ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ಫೆ.25ರವರೆಗೆ ನಿರಂತರವಾಗಿ ಹೋರಾಟ ನಡೆಯುತ್ತಿರುತ್ತದೆ. ಈ ಮಧ್ಯೆ ಬಿಜೆಪಿ ಸರ್ಕಾರ ತಿದ್ದುಪಡಿ ಮರಳಿ ಪಡೆಯುವ ಬಗ್ಗೆ ಕಾದು ನೋಡುತ್ತೇವೆ. ಇಲ್ಲದಿದ್ದರೆ ದೆಹಲಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳುತ್ತೇವೆ ಎಂದರು.
ಬುಡಾ ಅಧ್ಯಕ್ಷ ಲಕ್ಷ$್ಮಣರಾವ್​ ಚಿಂಗಳೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ಮೃಣಾಲ ಹೆಬ್ಬಾಳ್ಕರ್​, ವಾಕರಸಾ ಸಂಸ್ಥೆ ಉಪಾಧ್ಯಕ್ಷ ಸುನೀಲ ಹನಮಣ್ಣವರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಧಾಕರ ಬಡಿಗೇರ, ಕಾಡಾ ಅಧ್ಯಕ್ಷ ಯುವರಾಜ ಕದಂ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net