ಬೆಳಗಾವಿ ಜಿಲ್ಲೆಗೆ ರಾಷ್ಟ್ರಮಮಟ್ಟದ ಮನ್ನಣೆ

ನವದೆಹಲಿಯ ಕೇಂದ್ರ ಆಹಾರ ಸಂಸ್ಕರಣಾ ಸಚಿವಾಲಯ ಸಭಾಂಗನದಲ್ಲಿ ಜರುಗಿದ ಸಮಾವೇಶದಲ್ಲಿ ಸಚಿವ ಚಿರಾಗ್ ಪಾಸ್ವಾನ  ಅವರು ಎಚ್.ಡಿ. ಕೋಳೇಕರನ್ನು ಸನ್ಮಾನಿಸಿದರು.
ನವದೆಹಲಿಯ ಕೇಂದ್ರ ಆಹಾರ ಸಂಸ್ಕರಣಾ ಸಚಿವಾಲಯ ಸಭಾಂಗನದಲ್ಲಿ ಜರುಗಿದ ಸಮಾವೇಶದಲ್ಲಿ ಸಚಿವ ಚಿರಾಗ್ ಪಾಸ್ವಾನ ಅವರು ಎಚ್.ಡಿ. ಕೋಳೇಕರನ್ನು ಸನ್ಮಾನಿಸಿದರು.
Published on

 ಬೆಳಗಾವಿ :

ರೈತರನ್ನು ಆರ್ಥಿಕವಾಗಿ ಸದೃಢಗೊಳಿಸುವ, ಗ್ರಾಮೀಣ ಭಾಗದಲ್ಲಿ  ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳಿಗೆ ಆರ್ಥಿಕ ಬಲ ನೀಡುವ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಊಉ) ಯೋಜನೆಯ ಅನುಷ್ಠಾನದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಬೆಳಗಾವಿ ಜಿಲ್ಲೆಗೆ  ರಾಷ್ಟ್ರಮಟ್ಟದಲ್ಲಿ ಮನ್ನಣೆ ದೊರೆತಿದೆ.

 ಪಿಎಂಎಫ್‌ಎಂಇ ಯೋಜನೆ ಆರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಕೇಂದ್ರ ಆಹಾರ ಸಂಸ್ಕರಣಾ ಸಚಿವಾಲಯದ ವತಿಯಿಂದ ಆ.24 ಹಾಗೂ 25ರಂದು ನಡೆದ ಸಮಾವೇಶದಲ್ಲಿ  ಯೋಜನೆಯ ಅನುಷ್ಠಾನದಲ್ಲಿ ಉತ್ತಮ ಸಾಧನೆ ತೋರಿದ ರಾಜ್ಯಗಳು ಹಾಗೂ ಜಿಲ್ಲೆಗಳ ಪ್ರತಿನಿಧಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ಯೋಜನೆಯ ಅನುಷ್ಠಾನದಲ್ಲಿ ಉತ್ತಮ ಪ್ರಗತಿ ಸಾಧಿಸಿರುವ ಬೆಳಗಾವಿಯ ಜಂಟಿ ಕೃಷಿ ನಿರ್ದೇಶಕ  ಎಚ್.ಡಿ. ಕೋಳೇಕರ್ ಅವರನ್ನು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್ ಪಾಸ್ವಾನ ಸ್ಮರಣಿಕೆ ಹಾಗೂ ಪ್ರಮಾಣಪತ್ರ ನೀಡಿ ಗೌರವಿಸಿದರು.
ರಾಜ್ಯದಲ್ಲಿಯೇ ಬೆಳಗಾವಿ ಜಿಲ್ಲೆಯು ಪಿಎಂಎಫ್‌ಎಂಇ ಯೋಜನೆಯಡಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳಿಗೆನೆರವು ನೀಡಿ ಗಮನಾರ್ಹ ಸಾಧನೆ ಮಾಡಿದೆ.  ಜಿಲ್ಲೆಯ 1,279 ಕಿರು ಉದ್ದಿಮೆದಾರರಿಗೆ 97.14 ಕೋಟಿ ರೂ.ಬ್ಯಾಂಕ ಸಾಲ ಮಂಜೂರಾಗಿದೆ. ಇದರಲ್ಲಿ 36.61 ಕೋಟಿ ರೂ.ಸಹಾಯಧನ ಒದಗಿಸಲಾಗಿದೆ.ಕೃಷಿ ಇಲಾಖೆಯು ವಿವಿಧ ಬ್ಯಾಂಕುಗಳ ಸಹಯೋಗದೊಂದಿಗೆ ಅರ್ಹ ಕಿರು ಉದ್ದಿಮೆದಾರರನ್ನು ಗುರುತಿಸಿ, ಅವರಿಗೆ ಸಾಲ ಹಾಗೂ ಸಹಾಯಧನ ದೊರಕುವಂತೆ ಕ್ರಮ ಕೈಗೊಂಡಿದೆ.
ಜಿಪಂ ಸಿಇಒ ರಾಹುಲ ಶಿಂಧೆ, ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌ಮಾರ್ಗದರ್ಶನ ಮತ್ತು ಬೆಂಬಲದೊಂದಿಗೆ ಕೃಷಿ ಇಲಾಖೆ ಯೋಜನೆಯ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಿದೆ. ಬ್ಯಾಂಕುಗಳ ಸಹಕಾರದೊಂದಿಗೆ ಫಲಾನುಭವಿಗಳನ್ನು ಗುರುತಿಸಿ, ಯೋಜನೆಯ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯ ಉದ್ಯಮಿಗಳಿಗೆ ತಲುಪಿಸುವಲ್ಲಿ ಇಲಾಖೆ ಯಶಸ್ವಿಯಾಗಿದೆ.ಕೃಷಿ ಉತ್ಪನ್ನಗಳಿಗೆ ಮೌಲ್ಯವರ್ಧನೆ, ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಸಣ್ಣ ಉದ್ಯಮಿಗಳ ಆರ್ಥಿಕ ಸಬಲೀಕರಣಕ್ಕೆ ಯೋಜನೆ ಸಹಕಾರಿಯಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಚ್.ಡಿ.ಕೋಳೇಕರ್ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net