ನಿಜಲಿಂಗಪ್ಪ ದಕ್ಷ, ಪ್ರಾಮಾಣಿಕ ನಾಯಕ

ಮಾಜಿ ಸಿಎಂ ಎಸ್. ನಿಜಲಿಂಗಪ್ಪನವರ ಜನ್ಮ ದಿನಾಚರಣೆ
ಮಾಜಿ ಸಿಎಂ ಎಸ್. ನಿಜಲಿಂಗಪ್ಪನವರ ಜನ್ಮ ದಿನಾಚರಣೆ
Published on
ಬೆಳಗಾವಿ: ಎಸ್.ನಿಜಲಿಂಗಪ್ಪ ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ರಾಜ್ಯ ಕಂಡ ಅಪರೂಪದ ರಾಜಕಾರಣಿ. ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬುಧವಾರ ಮಾಜಿ ಸಿಎಂ ಎಸ್.ನಿಜಲಿಂಗಪ್ಪನವರ ಜನ್ಮದಿನದ ಅಂಗವಾಗಿ ಬೆಳಗಾವಿ ಸುವರ್ಣಸೌಧದಲ್ಲಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಅವಿಭಜಿತ ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರಾಗಿದ್ದರು. ಪ್ರಧಾನಿ ಇಂದಿರಾ ಗಾಂಧಿ ಅವರೊಂದಿಗೆ ರಾಜಕೀಯ ಭಿನ್ನಾಭಿಪ್ರಾಯ ಬೆಳೆದು ಬೇರೆ ಪಕ್ಷ ರಚಿಸಿದ್ದರು. ಭ್ರಷ್ಟಾಚಾರದ ವಿರುದ್ಧವಾಗಿದ್ದ ರಾಜಕಾರಣಿಯಾಗಿದ್ದರು ಎಂದರು.
ವರಿಷ್ಠರು ನಿರ್ಧಾರ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರಿಯುವರೆ ಎಂದು ಸುದ್ದಿಗಾರರ ಪ್ರಶ್ನೆಗೆ ‘ಪಕ್ಷದ ವರಿಷ್ಠರು ಸೂಚನೆ ಅಂತಿಮ’ ಎಂದು ಸಿಎಂ ಪ್ರತಿಕ್ರಿಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net