ತೆಲಸಂಗ ಪಿಕೆಪಿಎಸ್‌ಗೆ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ ನಿಂಗಪ್ಪ ಹಾಗೂ ಉಪಾಧ್ಯಕ್ಷೆ ಗೀತಾ ಅವರಿಗೆ ಚುನಾವಣಾಧಿಕಾರಿ ಆರ್.ಎನ್.ನೂಲಿ ಪ್ರಮಾಣಪತ್ರ ವಿತರಿಸಿದರು. ಅಮಗೊಂಡ ಖೊಬ್ರಿ ಇತರರಿದ್ದರು.
Published on:
Copied
Follow Us
ತೆಲಸಂಗ: ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಗೆ ಗುರುವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ನಿಂಗಪ್ಪ ಶೆಲೆಪ್ಪಗೋಳ ಹಾಗೂ ಉಪಾಧ್ಯಕ್ಷೆಯಾಗಿ ಗೀತಾ ಮಠಪತಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಆರ್.ಎನ್.ನೂಲಿ ಘೋಷಿಸಿದರು.
ನೂತನ ಅಧ್ಯಕ್ಷ ನಿಂಗಪ್ಪ ಶೆಲೆಪ್ಪಗೋಳ ಮಾತನಾಡಿ, ಸಂಘದ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ರೈತರಿಗೆ ಸಕಾಲಕ್ಕೆ ಸಾಲ ಸೌಲಭ್ಯ ಹಾಗೂ ಸರ್ಕಾರದ ಯೋಜನೆ ತಲುಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.