ಚಿಕ್ಕೋಡಿ: ರಾಷ್ಟ್ರೀಯ ಸೇವಾ ಯೋಜನೆ ಸದೃಢ ಮತ್ತು ಸುಸ್ಥಿರ ಸಮಾಜ ಕಟ್ಟುವಲ್ಲಿ ಸಹಕಾರಿಯಾಗಿವೆ ಎಂದು ಚಿಂಚಣಿಯ ಅಲ್ಲಮಪ್ರಭು ಸಿದ್ಧಸಂಸ್ಥಾನ ಮಠದ ಶಿವಪ್ರಸಾದ ಸ್ವಾಮೀಜಿ ಅಭಿಪ್ರಾಯಪಟ್ಟರು.
ತಾಲೂಕಿನ ಚಿಂಚಣಿ ಗ್ರಾಮದಲ್ಲಿ ಕೆಎಲ್‌ಇ ಸಂಸ್ಥೆ ಬಸವಪ್ರಭು ಕೋರೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಈಚೆಗೆ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಲು ಶಿಬಿರ ಉಪಯುಕ್ತವಾಗಿದ್ದು, ದೇಶದ ಭವಿಷ್ಯ ಯುವ ಜನತೆ ಕೈಯಲ್ಲಿದೆ. ಪಠ್ಯದ ಜತೆಗೆ ಸಾಮಾಜಿಕ ಜವಾಬ್ದಾರಿ ಬೆಳೆಸಿಕೊಳ್ಳಬೇಕು ಎಂದರು.
ಪ್ರಾಚಾರ್ಯ ಡಾ.ಬಿ.ಜಿ.ಕುಲಕರ್ಣಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯು ಶಿಬಿರಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಮೂಲಕ ಸರ್ವತೋಮುಖ ಬೆಳವಣಿಗೆಗೆ ಸಹಕಾರಿ ಎಂದರು.
ಮಠದ ಆಡಳಿತ ಮಂಡಳಿ ಅಧ್ಯಕ್ಷ ಬಸವರಾಜ ಪಾಟೀಲ, ಉಪಪ್ರಾಚಾರ್ಯ ಸುಧೀರ ಕೋಟಿವಾಲೆ, ಪ್ರಾಧ್ಯಾಪಕ ಸಿದ್ಧಲಿಂಗ ಮಟ್ಟೆಪ್ಪನವರ, ಅಧಿಕಾರಿ ಪ್ರದೀಪ ಸಂಗಪ್ಪಗೋಳ, ಪರಗೌಡ ಅಮ್ಮಣಗಿ, ಸಂತೋಷ ಹಿರೇಮಠ ಇತರರಿದ್ದರು.