ಇದೇ ಸಂದರ್ಭದಲ್ಲಿ ಪಾಲಿಕೆ ಕಂದಾಯ ಉಪ ಆಯುಕ್ತ ಸಿದ್ದು ಹಲ್ಲೋಳಿ ಮಾತನಾಡಿ, ಸದಾಶಿವ ನಗರದ ಅಭಿವೃದ್ಧಿ, ಸ್ಮಾರ್ಟ್ ಸಿಟಿ ಹೂವಿನ ಕುಂಡಗಳ ತೆರವು, ನಗರದ ರಸ್ತೆ ಅಭಿವೃದ್ಧಿಪಡಿಸುವ ಕುರಿತು ಹಿಂದಿನ ಸಭೆಯಲ್ಲಿ ತೆಗೆದುಕೊಂಡ ನಿರ್ಣಯವನ್ನು ಮಂಡಿಸಿದರು. ಆಡಳಿತ ಪಕ್ಷದ ನಾಯಕ ಸಂತೋಷ ಪೇಡ್ನೇಕರ, ದೀಪಾಲಿ ಟೋಪಗಿ ಇತರರಿದ್ದರು.