ಪಾಲಿಕೆ ವ್ಯಾಪ್ತಿಯ ಮಾರುಕಟ್ಟೆ, ರಸ್ತೆ ಬದಿಗಳಲ್ಲಿ ಒತ್ತುವರಿ ಮಾಡಿಕೊಂಡು ವ್ಯಾಪಾರ ವಹಿವಾಟು ನಡೆಸುವಂತಿಲ್ಲ. ಗಣಪತಿ ಗಲ್ಲಿ, ಶನಿವಾರ ಕೂಟ, ಮಾರುತಿ ಗಲ್ಲಿ, ಖಡೇಬಜಾರ, ಎಪಿಎಂಸಿ ರಸ್ತೆ, ಕಾಲೇಜು ರಸ್ತೆ, ಕೃಷ್ಣದೇವರಾಯ ವೃತ್ತ ಸೇರಿ ವಿವಿಧ ಭಾಗಗಳಲ್ಲಿ ಪುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಅಂಗಡಿಕಾರರ ಸ್ವಯಂ ಪ್ರೇರಣೆಯಿಂದ ತೆರವು ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಪಾಲಿಕೆ ವತಿಯಿದ ಒತ್ತುವರಿ ತೆರವು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.