ಶೈಕ್ಷಣಿಕ ಪ್ರಗತಿಯಲ್ಲಿ ಪಾಲಕರ ಪಾತ್ರ ಹೆಚ್ಚು

ಮಜಲಟ್ಟಿ ಸರ್ಕಾರಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪಾಲಕರ ಉಪನ್ಯಾಸಕರ ಮಹಾಸಭೆಯನ್ನು ಉಪನಿರ್ದೇಶಕ ಪಾಂಡುರಂಗ ಭಂಡಾರಿ ಉದ್ಘಾಟಿಸಿದರು. ಆನಂದ ಕೋಳಿ, ಆರ್.ಬಿ.ಸಂಗಪ್ಪಗೋಳ ಇತರರಿದ್ದರು.
ಮಜಲಟ್ಟಿ ಸರ್ಕಾರಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪಾಲಕರ ಉಪನ್ಯಾಸಕರ ಮಹಾಸಭೆಯನ್ನು ಉಪನಿರ್ದೇಶಕ ಪಾಂಡುರಂಗ ಭಂಡಾರಿ ಉದ್ಘಾಟಿಸಿದರು. ಆನಂದ ಕೋಳಿ, ಆರ್.ಬಿ.ಸಂಗಪ್ಪಗೋಳ ಇತರರಿದ್ದರು.
Published on
ಚಿಕ್ಕೋಡಿ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪಾಲಕರ ಪಾತ್ರ ಮಹತ್ತರವಾಗಿದೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಪಾಂಡುರಂಗ ಭಂಡಾರಿ ಹೇಳಿದರು.
ತಾಲೂಕಿನ ಮಜಲಟ್ಟಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪಾಲಕರ ಉಪನ್ಯಾಸಕರ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಬಡ ವಿದ್ಯಾರ್ಥಿಗಳ ಬಾಳಿಗೆ ಬೆಳಕು ನೀಡುತ್ತಿರುವ ಮಜಲಟ್ಟಿ ಸರ್ಕಾರಿ ಪದವಿಪೂರ್ವ ಕಾಲೇಜ್ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು.
ಕಾಲೇಜಿನ ಪ್ರಾಚಾರ್ಯ ಆನಂದ ಕೋಳಿ ಮಾತನಾಡಿ, ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಅನೇಕ ಕ್ರಮ ಕೈಗೊಳ್ಳುತ್ತಿರುವುದು ವಿಶೇಷವಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಂಡು ಜೀವನದಲ್ಲಿ ಸಾಧನೆ ಮಾಡಬೇಕೆಂದರು.
ಗ್ರಾಮದ ಧುರೀಣರಾದ ಆರ್.ಬಿ.ಸಂಗಪ್ಪಗೋಳ, ಕಾಲೇಜು ಸುಧಾರಣಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗೂ ಗ್ರಾಪಂ ಸದಸ್ಯರು ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net