ಪಠ್ಯೇತರ ಚಟುವಟಿಕೆಯಲ್ಲೂ ಭಾಗಿಯಾಗಲಿ

ಬೆಳಗಾವಿ ನಗರದ ಕೆಎಲ್‌ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಏಕವಲಯ ಪುರುಷ ಹಾಗೂ ಮಹಿಳೆಯರ ಬಾಸ್ಕೆಟ್ ಬಾಲ್ ಆಯ್ಕೆ ಪ್ರಕ್ರಿಯೆ, ಪಂದ್ಯಾವಳಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಿ.ಶ್ರೀನಿವಾಸ, ಡಾ.ಜ್ಯೋತಿ ಕವಳೇಕರ, ವಿ.ಕೆ.ಗಾಣಿಗೇರ, ವಿ.ಸಿ.ಕಾಮಗೋಳ, ಎಸ್.ಜಿ.ಸಂಜಪ್ಪನವರ, ಡಾ.ವಿನಯಕುಮಾರ ಎಂ. ಇತರರಿದ್ದರು.

Published on
ಬೆಳಗಾವಿ: ಕ್ರೀಡಾಪಟುಗಳು ವಿದ್ಯಾಭ್ಯಾಸದಲ್ಲಿ ಹಿಂದೆ ಉಳಿಯುತ್ತಾರೆ ಎಂಬುದು ತಪ್ಪು ಕಲ್ಪನೆಯಾಗಿದೆ. ಪಠ್ಯದ ಜತೆ ಪಠ್ಯೇತರ ಚಟುವಟಿಗಳಲ್ಲೂ ಭಾಗಿಯಾಗಬೇಕು ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಬಿ.ಶ್ರೀನಿವಾಸ ಹೇಳಿದರು.
ನಗರದ ಕೆಎಲ್‌ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಏಕವಲಯ ಪುರುಷ ಹಾಗೂ ಮಹಿಳೆಯರ ಬಾಸ್ಕೆಟ್ ಬಾಲ್ ಆಯ್ಕೆ ಪ್ರಕ್ರಿಯೆ ಮತ್ತು ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ಕ್ರೀಡೆಯಿಂದ ಮಾನಸಿಕ, ದೈಹಿಕ ಸಾಮರ್ಥ್ಯ ಹೆಚ್ಚಾಗುತ್ತದೆ ಎಂದರು.
ಪ್ರಾಚಾರ್ಯೆ ಡಾ.ಜ್ಯೋತಿ ಕವಳೇಕರ ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾ ವಿಭಾಗದ ಉಪಾಧ್ಯಕ್ಷ ವಿ.ಕೆ.ಗಾಣಿಗೇರ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಶಿವಾನಂದ ಬುಲಬುಲಿ, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸತೀಶ ಎಂ.ಪಿ., ಪದವಿಪೂರ್ವ ವಿಭಾಗದ ಪ್ರಾಚಾರ್ಯ ವಿ.ಸಿ.ಕಾಮಗೋಳ, ಆಜೀವ ಸದಸ್ಯ ಎಸ್.ಜಿ.ಸಂಜಪ್ಪನವರ, ಡಾ.ವಿನಯಕುಮಾರ ಎಂ. ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net