ಬಾಕಿ ಕಾಮಗಾರಿ ಪೂರ್ಣಗೊಳಿಸಿ

 ಗುರ್ಲಾಪುರ ಕ್ರಾಸ್​ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ತಾಲೂಕುಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು. ಶ್ರೀಶೈಲ ಗುಡುಮೆ, ಡಾ.ಮೋಹನ ಭಸ್ಮೆ ಇತರರಿದ್ದರು.
ಗುರ್ಲಾಪುರ ಕ್ರಾಸ್​ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ತಾಲೂಕುಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು. ಶ್ರೀಶೈಲ ಗುಡುಮೆ, ಡಾ.ಮೋಹನ ಭಸ್ಮೆ ಇತರರಿದ್ದರು.
Published on
ಮೂಡಲಗಿ: ಗ್ರಾಮ ಪಂಚಾಯಿತಿಗಳಿಗೆ ಡಿಸೆಂಬರ್​ ಇಲ್ಲವೇ ಜನೇವರಿ ತಿಂಗಳಲ್ಲಿ ಚುನಾವಣೆ ೂಷಣೆಯಾಗಬಹುದು. ಹೀಗಾಗಿ, ೇತ್ರದಲ್ಲಿ ಬಾಕಿ ಉಳಿದ ಕಾಮಗಾರಿಗಳನ್ನು ಶ್ರೀವೇ ಪೂರ್ಣಗೊಳಿಸಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು.
ಸಮೀಪದ ಗುರ್ಲಾಪುರ ಕ್ರಾಸ್​ ಪ್ರವಾಸಿ ಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮೂಡಲಗಿ ಮತ್ತು ಗೋಕಾಕ ತಾಲೂಕುಮಟ್ಟದ ಅಧಿಕಾರಿಗಳ ಸಭೆಯ ಅಧ್ಯತೆ ವಹಿಸಿ ಮಾತನಾಡಿ, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ರೈತರಿಗೆ ತೊಂದರೆಯಾದರೆ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ೇತ್ರದ ಸುಮಾರು 20 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂ ಯೋಜನೆಗೆ ಶಿಲಾನ್ಯಾಸ ನೆರವೇರಿಸಲಾಗಿದೆ. ಇದಕ್ಕಾಗಿ ನೀರಾವರಿ ಇಲಾಖೆಯಿಂದ ಮೊದಲ ಹಂತದ ಕಾಮಗಾರಿಗಾಗಿ ಅಂದಾಜು 192.30 ಕೋಟಿ ರೂ. ಅನುದಾನ ಮಂಜೂರಾಗಿದೆ. ಪ್ರಸ್ತುತ 7 ಕೆರೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಎರಡನೇ ಹಂತದಲ್ಲಿ 13 ಕೆರೆ ತುಂಬಿಸಲು 131.57 ಕೋಟಿ ರೂ. ಅನುದಾನ ಬರಬೇಕಿದೆ ಎಂದು ತಿಳಿಸಿದರು.
ಆರ್​ಡಿಪಿಆರ್​ ಇಲಾಖೆ ಅನುದಾನದಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಾಗಿ ಒಟ್ಟು 475 ಕೋಟಿ ರೂ. ಬಿಡುಗಡೆಗೊಂಡಿದ್ದು, 388 ಕೋಟಿ ರೂ. ಮೊತ್ತದ ಕಾಮಗಾರಿಗೆ ಟೆಂಡರ್​ ಪ್ರಕ್ರಿಯೆ ಮುಗಿದಿದೆ. ಇದರಿಂದ ಗೋಕಾಕ ಮತ್ತು ಮೂಡಲಗಿ ತಾಲೂಕಿನ ಸುಮಾರು 148 ಜನ ವಸತಿಗಳಿಗೆ ಅನುಕೂಲವಾಗಲಿದೆ. ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ಈಗಾಗಲೇ 30 ಕೋಟಿ ರೂ. ಅನುದಾನ ಬಂದಿದ್ದು, ಇನ್ನು 20 ಕೋಟಿ ರೂ. ಬರಬೇಕಿದೆ. ಅಗತ್ಯ ಅನುದಾನ ಬಿಡುಗಡೆಗೆ ಮೇಲಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ನಿರ್ದೇಶನ ನೀಡಿ, ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ತಹಸೀಲ್ದಾರ್​ಗಳಾದ ಶ್ರೀಶೈಲ ಗುಡುಮೆ, ಡಾ.ಮೋಹನ ಭಸ್ಮೆ, ತಾಪಂ ಇಒಗಳಾದ ಕೀರಪ್ಪ ಚಿನ್ನನ್ನವರ, ಪರಶುರಾಮ ಗಸ್ತೆ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net