ನಗರದ ವಿವಿಧ ವಾರ್ಡ್‌ಗಳಲ್ಲಿ ರಸ್ತೆ ಬದಿ, ಚರಂಡಿ, ಖಾಲಿ ನಿವೇಶನ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದೊಂದಿಗೆ ಪ್ಲಾಸ್ಟಿಕ್ ಎಸೆಯಲಾಗುತ್ತಿದೆ. ವ್ಯಾಪಾರಸ್ಥರು, ಮದ್ಯದಂಗಡಿಯವರು, ಮಾಂಸದಂಗಡಿಯವರು ಅಂಗಡಿ ತ್ಯಾಜ್ಯ ಮತ್ತು ಪ್ಲಾಸ್ಟಿಕ್ ಅನ್ನು ಎಲ್ಲೆಂದರಲ್ಲಿ ಎಸೆಯುತ್ತಿದ್ದಾರೆ. ಇದರಿಂದ ಪರಿಸರ ಮತ್ತು ಜನ-ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ನಗರದ ಅಂದವೂ ಹಾಳಾಗುತ್ತಿದೆ.