ಹೌದು.ಮಹಿಳಾ ಸ್ವಸಹಾಯ ಸಂಘಗಳನ್ನು ( ಸಂಜೀವಿನಿ) ಹೋಟೆಲ್ ಉದ್ದಿಮೆಯಲ್ಲಿ ತೊಡಗಿಸಿ ಉತ್ತೇಜಿಸಲು ಮತ್ತು ಆರ್ಥಿಕ ಸ್ವಾವಲಂಬನೆಗೆ ನೆರವಾಗುವ ಉದ್ದೇಶದಿಂದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ರಾಷ್ಟ್ರೀಯ ಜೀವನೋಪಾಯ ಮಿಷನ್ (ಎನ್‌ಎಲ್‌ಎಂ) ಆರಂಭಿಸಿರುವ ಮಹತ್ವಾಕಾಂಕ್ಷೆಯ ಯೋಜನೆ ಅಕ್ಕ ಕೆಫೆ ಉತ್ತಮ ಸ್ಪಂದನೆ ಸಿಕ್ಕಿದೆ. ಈ ಹಿನ್ನೆಲೆ ಬೆಳಗಾವಿ ಮಹಾನಗರ ಪಾಲಿಕೆ, ತಾಲೂಕು ಪಂಚಾಯತಿ,ತಾಲೂಕು ತಹಸೀಲ್ದಾರ ಕಚೇರಿ, ಕೋರ್ಟ್ ಆವರಣ, ಕಿತ್ತೂರು ರಾಣಿ ಚನ್ನಮ್ಮ ಮೃಗಾಲಯ, ಸವದತ್ತಿ ಯಲ್ಲಮ್ಮ ದೇವಸ್ಥಾನ ಹೀಗೆ ಪ್ರವಾಸಿ ತಾಣ, ಧಾರ್ಮಿಕ ಸ್ಥಳಗಳಲ್ಲಿ ಅಕ್ಕ ಕೆಫೆ ಆರಂಭಕ್ಕೆ ನಿರ್ಧರಿಸಿದೆ.