ನಗರದ ಜಿಪಂ ಸಭಾಂಗಣದಲ್ಲಿ ಶಾಲೆ ಹಾಗೂ ಅಂಗನವಾಡಿಗಳ ಪ್ರಾರಂಭೋತ್ಸವ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಶಾಲೆ ಹಾಗೂ ಅಂಗನವಾಡಿಗಳ ಒಳ, ಹೊರಭಾಗದಲ್ಲಿ ಸ್ವಚ್ಛತೆ ಕೈಗೊಳ್ಳಲು ಆದ್ಯತೆ ನೀಡಬೇಕು. ಆಹಾರ ಪದಾರ್ಥಗಳ ದಾಸ್ತಾನು ಕೊಠಡಿ ಶುಚಿಯಾಗಿಟ್ಟುಕೊಳ್ಳಬೇಕು. ಆಹಾರ ಪದಾರ್ಥ ಗುಣಮಟ್ಟ ಪರಿಶೀಲಿಸಬೇಕು. ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಇತರ ಸೌಕರ್ಯ ಕಲ್ಪಿಸಬೇಕು ಎಂದು ಹೇಳಿದರು.