ಹುಕ್ಕೇರಿ ತಾಲೂಕಿನ ಹಿಡಕಲ್ಲ ಡ್ಯಾಮ್ ಬಲದಂಡೆ ಕಾಲುವೆಗೆ ಭಾನುವಾರ ಭೇಟಿ ನೀಡಿದ ಸಚಿವ ಸತೀಶ ಜಾರಕಿಹೊಳಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮಕರಂದ ಪೆಡ್ನೇಕರ, ಮಂಜುನಾಥ ಹೊಸಮನಿ, ಎ.ಎಸ್.ಕಾಖಂಡಕಿ ಇತರರಿದ್ದರು.
ಜಲಾಶಯಗಳಿಂದ ನೀರು ಬಿಡುವ ಮುನ್ನ ಕಾಲುವೆಗಳ ಹೂಳೆತ್ತುವುದು ಹಾಗೂ ಗಿಡಗಂಟಿ ತೆರವುಗೊಳಿಸುವ ಕಾಮಗಾರಿ ಪೂರ್ಣಗೊಳಿಸುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿರ್ದೇಶನ ನೀಡಿದ್ದಾರೆ.
ಹುಕ್ಕೇರಿ ತಾಲೂಕಿನ ಹಿಡಕಲ್ಲ ಜಲಾಶಯ ವ್ಯಾಪ್ತಿಯ ಗೊಡಚಿನಮಲ್ಕಿ, ೋಡಗೇರಿ, ಮೇಲ್ಮಟ್ಟಿ ಭಾಗದ ಬಲದಂಡೆ ಕಾಲುವೆಗೆ ಭೇಟಿ ನೀಡಿ ನೀರಿನ ಹರಿವು, ನಿರ್ವಹಣಾ ಕಾರ್ಯ, ದುರಸ್ತಿ ಅಗತ್ಯವಿರುವ ಭಾಗ,
ರೈತರಿಗೆ ನೀರು ಸಮರ್ಪಕವಾಗಿ ತಲುಪುವ ವ್ಯವಸ್ಥೆ ಪರಿಶೀಲಿಸಿದ ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯವಿರುವ ಸ್ಥಳಗಳಲ್ಲಿ ತ್ವರಿತ ದುರಸ್ತಿ ಹಾಗೂ ನಿರ್ವಹಣಾ ಕಾಮಗಾರಿ ಕೈಗೊಳ್ಳಲು ಸೂಚಿಸಿದರು.
ಕಾಲುವೆ ಕೊನೆಯ ಭಾಗದಲ್ಲಿರುವ ರೈತರ ಜಮೀನುಗಳಿಗೂ ನೀರು ತಲುಪಲು ಅಗತ್ಯ ಕ್ರಮ ಕೈಗೊಳ್ಳಬೇಕು.
ಮುಂಗಾರು ಮಳೆ ಕೊರತೆಯಿಂದ ಸಾಕಷ್ಟು ನಷ್ಟ ಅನುಭವಿಸಿರುವ ರೈತರು ಕಾಲುವೆ ನೀರನ್ನೇ ಅವಲಂಬಿಸಿ ಬಿತ್ತನೆ ಮಾಡಿದ್ದಾರೆ. ಹೀಗಾಗಿ, ಅಧಿಕಾರಿಗಳು ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.