ಶೌಚಗೃಹ ನಿರ್ಮಾಣಕ್ಕೆ ಆದ್ಯತೆ ನೀಡಲಿ

ಮಜಲಟ್ಟಿಯ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಶೌಚಗೃಹ ದಿನ ಕಾರ್ಯಕ್ರಮದಲ್ಲಿ ವಿಶ್ವನಾಥ ಚೌಗಲಾ ಮಾತನಾಡಿದರು. ಹನುಮಂತ ಟಕ್ಕನ್ನವರ, ಶಿವಾನಂದ ಹಾರೋಗೊಪ್ಪ ಇದ್ದರು.
ಮಜಲಟ್ಟಿಯ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಶೌಚಗೃಹ ದಿನ ಕಾರ್ಯಕ್ರಮದಲ್ಲಿ ವಿಶ್ವನಾಥ ಚೌಗಲಾ ಮಾತನಾಡಿದರು. ಹನುಮಂತ ಟಕ್ಕನ್ನವರ, ಶಿವಾನಂದ ಹಾರೋಗೊಪ್ಪ ಇದ್ದರು.
Published on
ಚಿಕ್ಕೋಡಿ: ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಬಯಲಲ್ಲೇ ಮಲ ವಿಸರ್ಜನೆ ಮಾಡುತ್ತಿರುವುದು ಶೋಚನೀಯ ಸಂಗತಿ ಎಂದು ಉಪನ್ಯಾಸಕ ವಿಶ್ವನಾಥ ಚೌಗಲಾ ಹೇಳಿದರು.
ತಾಲೂಕಿನ ಮಜಲಟ್ಟಿಯ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದಡಿ ವಿಶ್ವ ಶೌಚಗೃಹ ದಿನದ ನಿಮಿತ್ತ ಬುಧವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿ, ಸರ್ಕಾರದಿಂದ ನೀಡುವ ಅನುದಾನ ಬಳಸಿಕೊಂಡು ಶೌಚಗೃಹ ನಿರ್ಮಿಸಿಕೊಂಡು ಬಳಸಬೇಕು ಎಂದರು.
ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಹನುಮಂತ ಟಕ್ಕನ್ನವರ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಬಾಣಂತಿಯರು, ಗರ್ಭಿಣಿಯರು, ಯುವತಿಯರು, ವೃದ್ಧರು ಮಲ ವಿಸರ್ಜನೆಗೆ ಹೋಗಲು ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರತಿ ಕುಟುಂಬ ಶೌಚಗೃಹ ನಿರ್ಮಿಸಿಕೊಂಡು ಬಳಸುವುದನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಆಂಗ್ಲ ಉಪನ್ಯಾಸಕ ಶಿವಾನಂದ ಹಾರೋಗೊಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net