ಬೆಳಗಾವಿ: ನಗರದ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯಕೀಯ ಅಧೀಕ್ಷಕ ಡಾ.ಸಂಜಯ ಕಂಬಾರಗೆ ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಿ ರೋಟರಿ ಕ್ಲಬ್ ಆಫ್ ವೇಣುಗ್ರಾಮ ರೋಟರಿ ಪ್ರೊೇಷನಲ್ ಎಕ್ಸಲೆನ್ಸ್ ಪ್ರಶಸ್ತಿ (ವೃತ್ತಿಪರ ಶ್ರೇಷ್ಠತಾ ಪ್ರಶಸ್ತಿ) ನೀಡಿ ಗೌರವಿಸಿದೆ. ವೈದ್ಯಕೀಯ ಪದವಿಪೂರ್ವ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ, ರೋಗಿಗಳಿಗೆ ಕರುಣಾಮಯ ಮತ್ತು ಗುಣಮಟ್ಟದ ಆರೋಗ್ಯಸೇವೆ ಒದಗಿಸುವಲ್ಲಿ, ಸಂಶೋಧನೆ ಉತ್ತೇಜಿಸುವಲ್ಲಿ ಹಾಗೂ ಆಸ್ಪತ್ರೆ ಸಮರ್ಥ ಆಡಳಿತದಲ್ಲಿ ಡಾ.ಸಂಜಯ ಕಂಬಾರ ಬದ್ಧತೆ ಪರಿಗಣಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಯುಎಸ್‌ಎಂ-ಕೆಎಲ್ಇ ನಿರ್ದೇಶಕ ಡಾ.ಎಚ್.ಬಿ. ರಾಜಶೇಖರ, ಆಸ್ಪತ್ರೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಎನ್., ಆಸ್ಪತ್ರೆ ವೈದ್ಯರು ಹಾಗೂ ಸಹಾಯಕ ಸಿಬ್ಬಂದಿ ಡಾ.ಸಂಜಯಗೆ ಅಭಿನಂದನೆ ಸಲ್ಲಿಸಿದ್ದಾರೆ.